ಪಾಟ್ನಾ ರೈಲಿನ ಮೇಲೆ ನಕ್ಸಲ್ ದಾಳಿ: ಆರ್ಪಿಎಫ್ ಯೋಧ ಸೇರಿ 3 ಸಾವು

ಪಾಟ್ನಾ: ರೇಲ್ವೆ ಭದ್ರತಾ ಪಡೆಯ ಯೋಧರನ್ನು ಗುರಿಯಾಗಿರಿಸಿಕೊಂಡು ಧನ್ಬಾದ್-ಪಾಟ್ನಾ ಎಕ್ಸಪ್ರೆಸ್ ರೈಲಿನ ಮೇಲೆ ಗುರುವಾರ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಜಮೈ ರೇಲ್ವೆ ನಿಲ್ದಾಣ ಸಮೀಪದ ಕುಂದ್ರಾ ಅರಣ್ಯ ಪ್ರದೇಶದಲ್ಲಿ 100 ನಕ್ಸಲರ ತಂಡ ರೈಲನ್ನು ಬಲಂವತವಾಗಿ ತಡೆದು, ಆರ್ಪಿಎಫ್ ಯೋಧರಿದ್ದ ರೈಲಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಆರ್ಪಿಎಫ್ ಯೋಧರು ಗುಂಡು ಹಾರಿಸಿದ್ದಾರೆ.
ನಕ್ಸಲ್ ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸೇರಿದಂತೆ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್.ಕೆ.ಭಾರದ್ವಾಜ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಮೃತಪಟ್ಟ ಯೋಧನನ್ನು ಸುಕಾಂತ್ ಡಿ. ಸಿಂಗ್ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಮೃತರಾದ ಪ್ರಯಾಣಿಕರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಭಾರದ್ವಾಜ್ ಹೇಳಿದ್ದಾರೆ.
ಲಕ್ಕಿಸರೈನ ರೇಲ್ವೆ ನಿಲ್ದಾಣಕ್ಕೆ ಬಂದ ರೈಲನ್ನು ಪೋಲಿಸರು ಪರಿಶೀಲಿಸಿದಾಗ ಎಸಿ ಕೋಚ್ನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಬಿಹಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
ನಕ್ಸಲ್ ದಾಳಿ ಕುರಿತು ವಿಷಯ ತಿಳಿಯುತ್ತಿದ್ದಂತೆ ಹೆಚ್ಚುವರಿ ಸಿಆರ್ಪಿಎಫ್ ಸದಸ್ಯರ ತಂಡವನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಜಮೈನ ಎಸ್ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


