ಕಾವೇರಿ ವಿವಾದ: ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಮುಂದಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಕಾವೇರಿ ಮೇಲ್ವಿಚಾರಣಾ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ನೇಮಿಸಿಲ್ಲ. ಹೀಗಾಗಿ ಸಮಿತಿಗೆ ಕಾವೇರಿ ವಿಚಾರ ಸಂಬಂಧ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ನಮಗೆ ಈಗಾಗಲೇ ಕರ್ನಾಟಕ ನೀರು ಬಿಡಬೇಕಿತ್ತು. ಆದರೆ ಇದುವರೆವಿಗೂ ಅದು ನೀರು ಬಿಡದೇ ನ್ಯಾಯಾಂಗ ನಿಂದನೆ ಮಾಡಿದೆ. ಹೀಗಾಗಿ ನಾವು ಕರ್ನಾಟಕದ ವಿರುದ್ಧ ನ್ಯಾಯಾಲಯದ ಮೊರೆಹೋಗುವುದಾಗಿ ಜಯಲಲಿತಾ ತಿಳಿಸಿದ್ದಾರೆ.
ಅಲ್ಲದೆ ಕಾವೇರಿ ನಿಯಂತ್ರಣ ಸಮಿತಿ ಮತ್ತು ಕಾವೇರಿ ನಿರ್ವಹಣಾ ಮಂಡಳಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಬೇಕು ಎಂದು ಜಯಾಲಲಿತಾ ಸುಪ್ರೀಂಕೋರ್ಟ್ ಬಳಿ ಮತ್ತೊಂದು ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ. 'ಕರ್ನಾಟಕದ ಒಪ್ಪಿಗೆಯ ನಂತರವೇ ಕಾವೇರಿ ಮೇಲ್ವಿಚಾರಣಾ ಸಮಿತಿ ಸ್ಥಾಪನೆಯಾಗಿದ್ದು, ಇದೀಗ ಕರ್ನಾಟಕ ತನ್ನ ರಾಗ ಬದಲಿಸಿದೆ. ಸಮಿತಿ ಪೂರ್ಣ ಪ್ರಮಾಣದಲ್ಲಿ ರಚನೆಯಾಗಿಲ್ಲ ಮತ್ತು ಸಮಿತಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ ಎಂಬ ಕಾರಣ ಮುಂದಿಟ್ಟಿರುವ ಕರ್ನಾಟಕ, ನೀರು ಬಿಡಲು ಹಿಂದೇಟು ಹಾಕುತ್ತಿದೆ ಎಂದು ಜಯಾ ಆರೋಪಿಸಿದ್ದಾರೆ.
ಒಟ್ಟಾರೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಾವೇರಿ ನದಿ ನೀರಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ನೀರಿಲ್ಲದೆ ಕರ್ನಾಟಕವೇ ಬರಗಾಲದಲ್ಲಿ ಮುಳುಗಿರ ಬೇಕಾದರೆ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ. ಕರ್ನಾಟಕಕ್ಕೆ ನೀರಿಲ್ಲದಿದ್ದರೂ ಪರವಾಗಿಲ್ಲ ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಜಯಲಿಲಿತಾ ಅವರ ಏಕಪಕ್ಷೀಯ ಧೋರಣೆ ಎಷ್ಟರಮಟ್ಟಿಗೆ ಸರಿಯಾದುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

