ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ವಿಕ್ರಂ ಅಗರ್ವಾಲ್‌ಗೆ ಜಾಮೀನು

Published On :

ಚೆನ್ನೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ವಿಕ್ರಂ ಅಗರ್ವಾಲ್ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಅಡಿಯಲ್ಲಿ ಚೆನ್ನೈ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಹೊಟೆಲ್ ಉದ್ಯಮಿ ವಿಕ್ರಂ ಅಗರ್ವಾಲ್ ಅವರಿಗೆ ಚೆನ್ನೈ ಮೆಟ್ರೋ ಪಾಲಿಟನ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾ. ಎಸ್.ಶರವಣನ್ ಅವರು, ವಿಕ್ರಮ್‌ಗೆ ಜಾಮೀನು ನೀಡಿದ್ದಾರೆ. ಅಲ್ಲದೆ ತಮ್ಮ ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ಪ್ರತಿದಿನ ತಪ್ಪದೇ ಸಿಐಡಿ ಪೊಲೀಸರ ಮುಂದೆ ಹಾಜರಾಗಿ ಸಹಿ ಮಾಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಕಳೆದ ಜೂನ್ 10ರಂದು ಚೆನ್ನೈನ ಸಿಐಡಿ ಪೊಲೀಸರು, ವಿಕ್ರಂ ಅಗರ್ವಾಲ್ ಅವರನ್ನು ಬಂಧಿಸಿ ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ನಂತರ ಅವರನ್ನು ನ್ಯಾಯಾಂಗ ವಿಚಾರಣೆ ಒಳಪಡಿಸಿದಾಗ ನ್ಯಾಯಾಲಯ ಅವರಿಗೆ ಜೂನ್ 14ರವರೆಗೆ ಪೊಲೀಸ್ ಬಂಧನಕ್ಕೊಪ್ಪಿಸಿತ್ತು. ಇಂದಿಗೆ ಅವರ ಬಂಧನದ ಅವಧಿ ಮುಕ್ತಾಯಗೊಂಡಿದ್ದು, ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.