ಪಾಕ್ನಲ್ಲಿ ಅವಳಿ ಬಾಂಬ್ ಸ್ಫೋಟ: 17 ವಿದ್ಯಾರ್ಥಿನಿಯರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರು ನಡೆಸಿದ ಅವಳಿ ಬಾಂಬ್ ಸ್ಫೋಟದಿಂದಾಗಿ 17 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಸೇರಿದ ಬಸ್ಸನ್ನು ಉಗ್ರರು ಸ್ಫೋಟಿಸಿದ್ದಾರೆ. ಸ್ಫೋಟದಿಂದಾಗಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, 17 ವಿದ್ಯಾರ್ಥಿನಿಯರು ಸಾವಿಗೀಡಾಗಿದ್ದಾರೆ. ಅಲ್ಲದೆ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಬೋಲನ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಉಗ್ರರು ಗಾಯಾಳು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯಕೀಯ ಕಾಂಪ್ಲೆಕ್ಸ್ಗೂ ಬಾಂಬ್ ಇಟ್ಟು ಸ್ಫೋಟಿಸುವ ಮೂಲಕ ತಮ್ಮ ಕ್ರೌರ್ಯವನ್ನು ಮೆರೆದಿದ್ದಾರೆ. ಈ ಸ್ಫೋಟದಿಂದಾಗಿ ಓರ್ವ ವೈದ್ಯ ಸೇರಿದಂತೆ ಓರ್ವ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾರೆ.
ಮಹಿಳೆಯರ ಶಿಕ್ಷಣವನ್ನು ವಿರೋಧಿಸುತ್ತಿರುವ ಪಾಕಿಸ್ತಾನ ಮೂಲಭೂತವಾದಿಗಳು ಮತ್ತು ತಾಲಿಬಾನ್ ಉಗ್ರರು, ಮಹಿಳಾ ವಿವಿಗೆ ಸೇರಿದ ಬಸ್ಗೆ ಬಾಂಬ್ ಅಳವಡಿಸಿ ಸ್ಫೋಟಗೊಳಿಸಿದ್ದಾರೆ. ಮಹಿಳಾ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಾಕಿಸ್ತಾನ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಇದೇ ಬಲೂಚಿಸ್ತಾನದ ಸಮೀಪವಿರುವ ಮಹಮದ್ ಅಲಿ ಜಿನ್ನಾ ಅವರ ಐತಿಹಾಸಿಕ ಬಂಗಲೆಯನ್ನು ಉಗ್ರರು ಸ್ಫೋಟಗೊಳಿಸಿದ್ದರು. ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ.
ಚಿತ್ರ ಕೃಪೆ: ಡಾನ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


