ಆಡ್ವಾಣಿ, ವಾಜಪೇಯಿ ಯುಗಾಂತ್ಯ, ಮತ್ತೆ ಮೈತ್ರಿ ಪ್ರಶ್ನೆ ಇಲ್ಲ: ನಿತೀಶ್

ಪಾಟ್ನಾ: ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದಿರುವ ಜೆಡಿಯು, ಎನ್ಡಿಎದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿಯವರ ಯುಗ ಅಂತ್ಯವಾಗಿದೆ. ಹೀಗಾಗಿ ಮೈತ್ರಿ ಬಗ್ಗೆ ಮರು ಪರಿಶೀಲಿಸುವ ಪ್ರಶ್ನೆಯೇ ಇಲ್ಲ. ಹಿರಿಯ ನಾಯಕರು ಹಾಗೂ ಪಕ್ಷ ತೆಗೆದುಕೊಂಡಿರುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಪಾಟ್ನಾದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಅವರು, ಬಿಜೆಪಿ ಜೊತೆಗಿನ 17 ವರ್ಷಗಳ ಹಳೆಯ ದೋಸ್ತಿಗೆ ಸದ್ಯ ತಿಲಾಂಜಲಿ ಹಾಕಿದ್ದು, ಮತ್ತೇ ಬಿಜೆಪಿ ಜೊತೆಗೆ ಸಖ್ಯ ಬೆಳೆಸುವುದಿಲ್ಲ. ಬಿಜೆಪಿಯು ತನ್ನ ಹಿರಿಯ ನಾಯಕರ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದೇ ವಿಚಾರವಾಗಿ ಕಳೆದ ಒಂದು ವರ್ಷದಿಂದ ಬಿಜೆಪಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದರು ಪ್ರಯೋಜನವಾಗಲಿಲ್ಲ ಎಂದು ದೂರಿದರು.
ಪಕ್ಷವನ್ನು ಕಟ್ಟಿ ಬೆಳೆಸಿದಂತ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರಂತ ಹಿರಿಯ ನಾಯಕರಿಗೆ ಪಕ್ಷ ಮೋಸಮಾಡಿದೆ. ಹಿರಿಯರಿಗೆ ಪಕ್ಷದಲ್ಲಿ ಸ್ವತಂತ್ರವಾಗಿ ನಡೆದುಕೊಳ್ಳಲು ಹಾಗೂ ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಎನ್ಡಿಎ ತನ್ನ ತತ್ವ ಸಿದ್ದಾಂತ ಮರೆತು ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಆಡ್ವಾಣಿಯಂತಹ ಹಿರಿಯ ನಾಯಕರ ಮಾತನ್ನೇ ದಿಕ್ಕರಿಸಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣೆ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಗೆ ನೀಡಿದೆ. ಪರಿಸ್ಥಿತಿ ಈಗಿರುವಾಗ ಮುಂದೆ ನಮ್ಮ ಮಾತಿಗೆ ಬಿಜೆಪಿ ಮನ್ನಣೆ ನೀಡುತ್ತದಯೇ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


