ಉತ್ತರ ಭಾರತದಲ್ಲಿ ಮಳೆಯ ಅಬ್ಬರಕ್ಕೆ 22 ಬಲಿ
ನವದೆಹಲಿ: ಉತ್ತರ ಭಾರತದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಮುನೆ ಉಕ್ಕಿ ಹರಿಯುತ್ತಿದ್ದು, ಉತ್ತರಖಂಡ ಹಾಗೂ ಹಿಮಾಚಲ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವೆ. ಅಲ್ಲದೆ ಪ್ರವಾಹದಿಂದಾಗಿ 22 ಮಂದಿ ಕೊಚ್ಚಿ ಹೋಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಭಾರತದಲ್ಲಿ ಮಾನ್ಸುನ್ ಅಬ್ಬರಕ್ಕೆ ಯಮುನೆ ಉಕ್ಕಿ ಹರಿಯುತ್ತಿದೆ. ಹೀಗಾಗಿ ಯಮುನೆ ಹರಿಯುವ ಗಂಗೋತ್ರಿ, ಕೇದಾರ್ನಾಥ್, ಹಾಗೂ ಭದ್ರಿನಾಥ್ಗಳಲ್ಲಿ ಜಲ ಪ್ರಯಳದ ಭೀತಿ ಎದುರಾಗಿದೆ. ಉತ್ತರಖಂಡನಲ್ಲಿ ಸುಮಾರು 50 ಮಂದಿ ಕಣ್ಮರೆಯಾಗಿದ್ದು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ರಕ್ಷಣ ಸಿಬ್ಬಂದಿ ಶಂಕಿಸಿದ್ದಾರೆ. ಸದ್ಯ ಉತ್ತರಾಖಂಡ ಸಂಪೂರ್ಣ ಜಲಾವೃತವಾಗಿದೆ. ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಉತ್ತರಕಾಶಿಯಲ್ಲಿ ಕೆಲವೊಂದು ಕಟ್ಟಡಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.
ಅತಿಯಾದ ಮಳೆಯಿಂದಾಗಿ ಉತ್ತರಖಂಡನಲ್ಲಿರುವ ಕಾಶಿಯಲ್ಲಿ ಯಮುನೆ ಉಕ್ಕಿ ಹರಿಯುತ್ತಿದೆ. ಕಾಶಿ ವಿಶ್ವನಾಥನ ದರ್ಶನಗೊಂದು ತೆರಳಿದ್ದ ಭಕ್ತಾಧಿಗಳು ಪ್ರವಾಹದಲ್ಲಿ ಸಿಲುಕಿದ್ದಾರೆ. ಭಕ್ತರನ್ನು ರಕ್ಷಿಸುವ ಕಾರ್ಯದಲ್ಲಿ ರಕ್ಷಣ ಸಿಬ್ಬಂದಿ ತೊಡಗಿದ್ದು, ರಕ್ಷಣ ಕಾರ್ಯ ಭರದಿಂದ ಸಾಗಿದೆ.
ಪ್ರವಾಹದಿಂದಾಗಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿರುವ ಜಿಲ್ಲಾಡಳಿತ ಸ್ಥಳೀಯರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಹಾಗೂ ಪ್ರವಾಹದಲ್ಲಿ ಸಿಲುಕಿರುವ ಪ್ರವಾಸಿಗರನ್ನು ರಕ್ಷಿಸುವ ಕಾರ್ಯ ಕೈಗೊಂಡಿದೆ. ಪ್ರವಾಹದಲ್ಲಿ ಕನಿಷ್ಠ 2000 ಮಂದಿ ಪ್ರವಾಸಿಗರು ಸಿಲುಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

