ಈಗಿನ ಸುದ್ದಿ

ಆಡ್ವಾಣಿ ಭೇಟಿ ಮಾಡಿದ ಮೋದಿ

ಆಡ್ವಾಣಿ ಭೇಟಿ ಮಾಡಿದ ಮೋದಿ
Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರನ್ನು ಮಂಗಳವಾರ ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಗೋವಾದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಮೋದಿ ಅವರನ್ನು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಇದಕ್ಕೆ ಆಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜಿನಾಮೆ ನೀಡುವ ಮೂಲಕ ಬಹಿರಂಗವಾಗಿಯೇ ಮೋದಿ ಆಯ್ಕೆಯನ್ನು ವಿರೋಧಿಸಿದ್ದರು. ನಂತರ ಆರ್‌ಎಸ್‌ಎಸ್ ಹಾಗೂ ಪಕ್ಷದ ನಾಯಕರ ಮನವೊಲಿಕೆ ಯತ್ನದಿಂದ ರಾಜಿನಾಮೆ ಹಿಂಪಡೆದಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದು ಮೋದಿ ಆಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಉಪಸ್ಥಿತರಿದ್ದರು.

ಆಡ್ವಾಣಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಆಡ್ವಾಣಿ ಅವರಿಗೆ ಕೃತಜ್ಞತೆ ಸಲ್ಲಿಸಲು ಮೋದಿ ಆಗಮಿಸಿದ್ದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದರು.

ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರನ್ನು ಭೇಟಿ ಮಾಡುವ ಸಂಬಂಧ ಮೋದಿ ದೆಹಲಿಗೆ ಆಗಮಿಸಿದ್ದು, ಈ ವೇಳೆ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ಮಧ್ಯೆ ಮೋಹನ್ ಭಾಗವತ್ ಅವರು ಸಹ ಇಂದು ಆಡ್ವಾಣಿ ಅವರನ್ನು ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.