ಬಂಧಿತರು ಉಗ್ರರಲ್ಲ: ಮಿರ್ಜಿ ಸ್ಪಷ್ಟನೆ
ಬೆಂಗಳೂರು: ನ್ಯಾನೋ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಉಗ್ರರಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಸ್ಪಷ್ಟಪಡಿಸಿದ್ದಾರೆ.
ಉದ್ಯಾನನಗರಿ ಬೆಂಗಳೂರಿಗೆ ಉಗ್ರರು ನುಸುಳಿರಬಹುದು ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಬೆನ್ನಲ್ಲೇ, ನಿನ್ನೆಯಿಂದ ಗುಜರಾತ್‌ನಿಂದ ಇಬ್ಬರು ಉಗ್ರರು ಟಾಟಾ ನ್ಯಾನೋ ಕಾರಿನಲ್ಲಿ ಬೆಂಗಳೂರಿಗೆ ಬಂದಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಶಂಕಾಸ್ಪದವಾಗಿ ಚಲಿಸುತ್ತಿದ್ದ ಟಾಟಾ ನ್ಯಾನೋ ಕಾರು ಮತ್ತು ಅದರಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.
ಆದರೆ ಪೊಲೀಸರು ಬಂಧಿಸಿರುವ ವ್ಯಕ್ತಿಗಳು ಉಗ್ರರಲ್ಲ ಎಂಬ ಮಾಹಿತಿ ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಗುಜರಾತ್ ನೋಂದಣಿ ಇರುವ ನ್ಯಾನೋ ಕಾರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದು ಈ ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆ ನಡೆಸಿ ಕಳುಹಿಸಲಾಗಿದೆ ಎಂದು ಮಿರ್ಜಿ ಸ್ಪಷ್ಟನೆ ನೀಡಿದರು.
ಈ ಹಿಂದೆ ಕೇಂದ್ರ ಗುಪ್ತಚರ ಇಲಾಖೆಯು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ಮಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿತ್ತು. ಅಲ್ಲದೆ ಇದರ ಬೆನ್ನಲ್ಲೇ ಗುಜರಾತ್‌ನಿಂದ ಇಬ್ಬರು ಉಗ್ರರು ಟಾಟಾ ನ್ಯಾನೋ ಕಾರಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ ಎಂಬ ಊಹಾಪೊಹಗಳು ಕೂಡ ಬೆಂಗಳೂರಿಗರಲ್ಲಿ ಆತಂಕ ಸೃಷ್ಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

