ಸದನದಲ್ಲಿ ತೆಲಂಗಾಣ ಹೋರಾಟ: 22 ಶಾಸಕರ ಅಮಾನತು
ಹೈದರಾಬಾದ್: ತೆಲಂಗಾಣ ರಾಜ್ಯ ರಚನೆ ಬಿಕ್ಕಟ್ಟು ಆಂಧ್ರಪ್ರದೇಶ ವಿಧಾನಸಭೆಯಲ್ಲಿಯೂ ಗದ್ದಲ ಉಂಟುಮಾಡಿದ್ದು, ಮಂಗಳವಾರ 22 ಶಾಸಕರನ್ನು ಅಮಾನತುಗೊಳಿಸಲಾಗಿದೆ.
ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಹೋರಾಟ ಸತತ 2 ದಿನಗಳ ಕಲಾಪವನ್ನು ನುಂಗಿಹಾಕಿದ್ದು, ತೆಲಂಗಾಣ ಭಾಗದ ಶಾಸಕರು ಕಲಾಪಕ್ಕೆ ಪದೇ ಪದೇ ಅಡ್ಡಿಯಾಗುತ್ತಿದ್ದರಿಂದ ಸ್ಪೀಕರ್ ಮನೋಹರ್ ಅವರು 22 ಶಾಸಕರನ್ನು ಅಮಾನತುಗೊಳಿಸಿದ್ದಾರೆ. ಈ ಪೈಕಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ 17 ಶಾಸಕರು ಮತ್ತು ಬಿಜೆಪಿ ಮತ್ತು ಪಕ್ಷೇತರರು ಸೇರಿ ಒಟ್ಟು 5 ಮಂದಿ ಶಾಸಕರನ್ನು ಸ್ಪೀಕರ್ ಅವರು ಅಮಾನತುಗೊಳಿಸಿದ್ದಾರೆ.
ಕಲಾಪ ಆರಂಭವಾದಾಗಿನಿಂದಲೂ ಈ ಎಲ್ಲ ಶಾಸಕರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದರು. ಅಲ್ಲದೆ ತೆಲಂಗಾಣ ರಾಜ್ಯ ರಚನೆ ಕುರಿತಂತೆ ಸರ್ಕಾರ ಪ್ರತ್ಯೇಕ ನಿರ್ಣಯ ಮಂಡಿಸಬೇಕು ಎಂದು ಪಟ್ಟುಹಿಡಿದಿದ್ದರು. ಹಲವು ಬಾರಿ ಸ್ಪೀಕರ್ ಮನೋಹರ್ ಅವರ ಮಧ್ಯಪ್ರವೇಶ ಮಾಡಿದರು ಕೂಡ ಜಗ್ಗದ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು. ಹೀಗಾಗಿ ಕಲಾಪವನ್ನು ಸುಗಮವಾಗಿಸುವ ಸಂಬಂಧ ಸ್ಪೀಕರ್ ಮನೋಹರ್ ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಭೆಕರೆಯಲಾಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಮತ್ತು ಕೆಲ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಲಾಪಕ್ಕೆ ಅಡ್ಡಿಯಾಗುತ್ತಿರುವ ಶಾಸಕರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.
ಸ್ಪೀಕರ್ ಮನೋಹರ್ ಅವರ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಟಿಆರ್ಎಸ್ ಮುಖಂಡರು, ನ್ಯಾಯಾಲಯದ ಮೊರೆಹೋಗುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

