ಈಗಿನ ಸುದ್ದಿ

ದೋಸ್ತಿ ಸರ್ಕಾರ ಅಂತ್ಯ: ವಿಪಕ್ಷ ಸ್ಥಾನಕ್ಕೆ ಬಿಜೆಪಿ ಸಿದ್ಧತೆ

ದೋಸ್ತಿ ಸರ್ಕಾರ ಅಂತ್ಯ: ವಿಪಕ್ಷ ಸ್ಥಾನಕ್ಕೆ ಬಿಜೆಪಿ ಸಿದ್ಧತೆ
Published On :

ಪಾಟ್ನಾ: ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವ ನಿತೀಶ್‌ಕುಮಾರ್ ನೇತೃತ್ವದ ಜೆಡಿಯು ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಕ್ಕರೆ ವಿಪಕ್ಷ ಸ್ಥಾನದಲ್ಲಿ ಕೂರಲು ಬಿಜೆಪಿ ಸಿದ್ಧತೆ ನಡೆಸಿದೆ.

ಇಂದು ನಡೆಯುವ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರು ವಿಶ್ವಾಸ ಮತಯಾಚಿಸಲಿದ್ದು, ಬಹುಮತ ಸಾಬೀತಾದರೆ ತಾವು ವಿಪಕ್ಷ ಸ್ಥಾನದಲ್ಲಿ ಕೂರಲು ಸಿದ್ಧ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮಂಗಲ್ ಪಾಂಡೆ ಅವರು ಹೇಳಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಂದ ಕಿಶೋರ್ ಯಾದವ್ ಮತ್ತು ವಿಧಾನ ಪರಿಷತ್‌ನ ನಾಯಕರಾಗಿ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಜೆಪಿಯು 91 ಸದಸ್ಯ ಬಲ ಹೊಂದಿದ್ದು, ವಿಧಾನಸಭೆಯಲ್ಲಿ ಜೆಡಿಯು ವಿಶ್ವಾಸ ಮತಯಾಚಿಸುವ ಸಂದರ್ಭದಲ್ಲಿ ಜೆಡಿಯುಗೆ ವಿರುದ್ಧವಾಗಿ ಮತ ಚಲಾಯಿಸುವುದಾಗಿ ಪಾಂಡೆ ಹೇಳಿದ್ದಾರೆ.

ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿರುವ ನಿತೀಶ್‌ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಮಂಗಳವಾರ ಬಿಜೆಪಿಯ ಸಚಿವರನ್ನು ವಜಾ ಮಾಡಿತ್ತು, ಹೀಗಾಗಿ ಜೆಡಿಯು ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.