ಕದನ ವಿರಾಮ ಉಲ್ಲಂಘನೆ: ಗಡಿಯಲ್ಲಿ ಗುಂಡಿನ ಚಕಮಕಿ

ಶ್ರೀನಗರ: ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪೂಂಚ್ ಪ್ರಾಂತ್ಯದ ಇಂಡೋ-ಪಾಕ್ ಗಡಿನಿಯಂತ್ರಣ ರೇಖೆ ಬಳಿ ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ಮಾಡಿದೆ.
ಪಾಕಿಸ್ತಾನ ಸೇನೆಯ ನಾಲ್ಕು ಸೈನಿಕರು ಭಾರತೀಯ ಗಡಿಯನ್ನು ಆಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಗುಂಡಿನ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪೂಂಚ್ ಪ್ರಾಂತ್ಯದ ಕೃಷ್ಣಾ ಘಾಟಿಯಲ್ಲಿ ಪಾಕ್ ಸೈನಿಕರು ಇಂದು ಬೆಳಗ್ಗೆ ಪ್ರತ್ಯಕ್ಷವಾಗಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಉಭಯ ಸೈನಿಕರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಸಾವು-ನೋವಿನ ಕುರಿತು ವರದಿಯಾಗಿಲ್ಲ.
ಪಾಕ್ ಸೈನಿಕರ ದಾಳಿಯನ್ನು ಖಂಡಿಸಿರುವ ಭಾರತೀಯ ಸೇನೆಯ ಅಧಿಕಾರಿಗಳು ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸುವಂತೆ ಸೈನಿಕರಿಗೆ ಸೂಚಿಸಿದ್ದಾರೆ. ಪಾಕ್ ಸೈನಿಕರ ವರ್ತನೆಯನ್ನು ಖಂಡಿಸಿರುವ ರಕ್ಷಣಾ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ಎನ್ ಆಚಾರ್ಯ ಅವರು, ಪಾಕ್ ಸೈನಿಕರು ಬೇಕೆಂದೇ ಭಾರತೀಯ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಾವು ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಿರುವಂತೆ ನಮ್ಮ ಸೈನಿಕರಿಗೆ ಸೂಚಿಸಿದ್ದೇವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಅಲ್ಲದೆ ಭಾರತೀಯ ಸೈನಿಕರು ಪ್ರತಿದಾಳಿ ನಡೆಸುತ್ತಿದ್ದಂತೆಯೇ ಪಾಕ್ ಸೈನಿಕರು ಹಿಮ್ಮೆಟ್ಟಿದ್ದಾರೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಂದು ಆಚಾರ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


