ಈಗಿನ ಸುದ್ದಿ

ಕೈಲಾಸ-ಮಾನಸ ಸರೋವರ ಯಾತ್ರೆ ರದ್ದು

ಕೈಲಾಸ-ಮಾನಸ ಸರೋವರ ಯಾತ್ರೆ ರದ್ದು
Published On :

ನವದೆಹಲಿ: ಪ್ರವಾಹ ಹಿನ್ನೆಲೆಯಲ್ಲಿ ಕೈಲಾಸ-ಮಾನಸ ಸರೋವರ ಯಾತ್ರೆಯನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಹಠಾತ್ ಪ್ರವಾಹ, ನೆರೆ ಹಾಗೂ ಭಾರಿ ಮಳೆಯಿಂದಾಗಿ ಸಾವಿರಾರು ಯಾತ್ರಾರ್ಥಿಗಳು ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಅಪಾಯಕ್ಕೆ ಸಿಲುಕಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಬ್ಯಾಚ್ ನಂಬರ್ 2ರಿಂದ 10ರ ವರೆಗಿನ ಯಾತ್ರೆಗಳನ್ನು ಇಂದು ರದ್ದು ಮಾಡಿದೆ.

ಇನ್ನು ಪ್ರವಾಹದಿಂದಾಗಿ ಐತಿಹಾಸಿಕ ಕೇದಾರನಾಥ್ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ದೇವಸ್ಥಾನವನ್ನು ಬಂದ್ ಮಾಡುವುದಾಗಿ ಉತ್ತರಾಖಾಂಡ್ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ತಿಳಿಸಿದ್ದಾರೆ.

ಕೇದಾರನಾಥ್ ದೇವಾಲಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಆದರೆ ಪರಿಹಾರ ಕಾರ್ಯಗಳ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ ಎಂದು ಬಹುಗುಣ ಹೇಳಿದ್ದಾರೆ.

ಕೆಸರಿಂದ ತುಂಬಿದ ಕೇದಾರನಾಥ: ಭಾರಿ ಮಳೆ ಮತ್ತು ಪ್ರವಾಹದಿಂದ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಹಿಂದೂಗಳ ಪವಿತ್ರ ಕ್ಷೇತ್ರ ಕೇದಾರನಾಥದಲ್ಲಿ ಈಗ ಕೆಸರಿನದ್ದೇ ಅಬ್ಬರ. ತೀರ್ಥಯಾತ್ರಿಗಳು, ಪ್ರವಾಸಿಗರು ಸೇರಿದಂತೆ 500ಕ್ಕೂ ಅಧಿಕ ಮಂದಿ ಶ್ರೀಕ್ಷೇತ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ಪೈಕಿ ಹಲವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಭರದಿಂದ ನಡೆಯುತ್ತಿದೆ. ಇದೇ ವೇಳೆ ಶ್ರೀಕ್ಷೇತ್ರದಲ್ಲಿ ಸಿಕ್ಕಿ ಹಾಕಿಕೊಂಡಿದ್ದ 200 ಮಂದಿಯನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ.

ಕುಸಿದ ಆವರಣ ಗೋಡೆ:  ಐತಿಹಾಸಿಕ ಕೇದಾರನಾಥ ದೇಗುಲದ ಆವರಣ ಗೋಡೆ ಪ್ರವಾಹರ ರಭಸಕ್ಕೆ ಕುಸಿದಿದೆ. ಆದರೆ ಇದರಿಂದಾಗಿ ದೇಗುಲಕ್ಕೆ ಹಾನಿಯಾಗಿಲ್ಲ. ಕುಸಿತದಿಂದ ಯಾವ ರೀತಿಯ ಹಾನಿ ಉಂಟಾಗಿದೆ ಎನ್ನುವುದನ್ನು ಇನ್ನಷ್ಟೇ ಅಂದಾಜಿಸಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.