ಈಗಿನ ಸುದ್ದಿ

ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ: ರಾಜನಾಥ್ ಸಿಂಗ್

ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ: ರಾಜನಾಥ್ ಸಿಂಗ್
Published On :

ಮುಂಬೈ: ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, 'ಪಕ್ಷದಲ್ಲಿ ಎಲ್ಲವೂ ಸರಿ ಇದೆ' ಎಂದು ಹೇಳುವ ಮೂಲಕ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಉದ್ಭವಿಸಿದ ಪಕ್ಷದಲ್ಲಿನ ಎಲ್ಲ ಗೊಂದಲಗಳಿಗೂ ತರೆ ಎಳೆಯು ಯತ್ನ ಮಾಡಿದ್ದಾರೆ.

ಆಂಗ್ಲ ದಿನ ಪತ್ರಿಕೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರ ನಡುವಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲವೂ ಸರಿ ಇದೆ ಎಂದು ಹೇಳಿದರು.

ಇದೇ ವೇಳೆ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವುದನ್ನು ತಳ್ಳಿಹಾಕದ ರಾಜನಾಥ್ ಸಿಂಗ್, 'ಜನರ ನಾಡಿ ಮಿಡಿತ'ವನ್ನು ಪಕ್ಷ ನಿರ್ಲಕ್ಷಿಸುವುದಿಲ್ಲ ಎಂದರು.

ಗೋವಾದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಮೋದಿ ಅವರನ್ನು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಇದಕ್ಕೆ ಆಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜಿನಾಮೆ ನೀಡುವ ಮೂಲಕ ಬಹಿರಂಗವಾಗಿಯೇ ಮೋದಿ ಆಯ್ಕೆಯನ್ನು ವಿರೋಧಿಸಿದ್ದರು. ನಂತರ ಆರ್‌ಎಸ್‌ಎಸ್ ಹಾಗೂ ಪಕ್ಷದ ನಾಯಕರ ಮನವೊಲಿಕೆ ಯತ್ನದಿಂದ ರಾಜಿನಾಮೆ ಹಿಂಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.