'ವಿಶ್ವಾಸ' ಗೆದ್ದ ನಿತೀಶ್: ಬಿಜೆಪಿಗೆ 'ವಿಪಕ್ಷ' ಸ್ಥಾನ ಫಿಕ್ಸ್

ಪಾಟ್ನಾ: ಎನ್ಡಿಎ ಮೈತ್ರಿ ಕಡಿದುಕೊಂಡು ಅಲ್ಪಮತಕ್ಕೆ ಕುಸಿದಿದ್ದ ಜೆಡಿ(ಯು) ಸರ್ಕಾರ ಬುಧವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ.
ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ದಕ್ಕಾಗಿ ಎನ್ಡಿಎ ಮೈತ್ರಿ ಕಡಿದುಕೊಂಡಿದ್ದ ಜೆಡಿ(ಯು), ಬಿಹಾರದಲ್ಲಿ ಅಲ್ಪಮತಕ್ಕೆ ಕುಸಿದಿತ್ತು. ಒಟ್ಟು 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಜೆಡಿ(ಯು)ಗೆ 122 ಸ್ಥಾನಗಳ ಅವಶ್ಯಕತೆ ಇತ್ತು. ಈ ಪೈಕಿ ಜೆಡಿ(ಯು) 118 ಶಾಸಕರನ್ನು ಹೊಂದಿದ್ದು, ನಾಲ್ಕು ಪಕ್ಷೇತರ ಶಾಸಕರು, ಕಾಂಗ್ರೆಸ್, ಸಿಪಿಐ ಶಾಸಕರು ಜೆಡಿ(ಯು)ಗೆ ಬೆಂಬಲ ನೀಡಿದ್ದಾರೆ. ಅಲ್ಲದೆ ನಿನ್ನೆ ಬಿಜೆಪಿಗೆ ರಾಜಿನಾಮೆ ನೀಡಿದ್ದ ನಾಲ್ಕು ಶಾಸಕರು ಬಿಜೆಪಿ ವಿಪ್ ಉಲ್ಲಂಘಿಸಿ ಜೆಡಿ(ಯು)ಗೆ ಬೆಂಬಲ ಸೂಚಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಇಂದು ನಡೆದ ವಿಶೇಷ ಅಧಿವೇಶನದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಒಟ್ಟು 126 ಶಾಸಕರ ಬೆಂಬಲ ಪಡೆಯುವುದರೊಂದಿಗೆ ಸರ್ಕಾರವನ್ನು ಉಳಿಸಿಕೊಂಡಿದೆ.
ಆದರೆ ಜೆಡಿ(ಯು)ಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಜೆಪಿ ಮಾತ್ರ ವಿಪಕ್ಷ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಈ ನಡುವೆ ನಿತೀಶ್ ಕುಮಾರ್ ಅವರು ಸದನದಲ್ಲಿ ವಿಶ್ವಾಸಮತ ಯಾಚಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ಸಭೆಯನ್ನು ಬಹಿಷ್ಕರಿಸಿದ್ದಾರೆ. ಒಟ್ಟಾರೆ ಬಿಜೆಪಿ ಮೈತ್ರಿ ಕಡಿದುಕೊಂಡರು ಕೂಡ ಬಿಹಾರದಲ್ಲಿ ಜೆಡಿ(ಯು) ಸರ್ಕಾರ ಸುಭದ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


