ಪ್ರವಾಸಿಗರ ರಕ್ಷಣೆಗೆ ಹೆಚ್ಚಿನ ಹೆಲಿಕಾಫ್ಟರ್ ಬಳಕೆ: ಶಿಂಧೆ

ನವದೆಹಲಿ: ಧಾರಾಕಾರ ಮಳೆಯಿಂದಾಗಿ ಉತ್ತರಖಂಡದಲ್ಲಿ ಭೂಕುಸಿತ ಹಾಗೂ ಪ್ರವಾಹ ಸಂಭವಿಸಿದ್ದರಿಂದ ಪ್ರವಾಸಕ್ಕೆಂದು ತೆರಳಿದ್ದ ಸಾವಿರಾರು ಪ್ರವಾಸಿಗರು ಸಾವಿನ ದವಡೆಗೆ ಸಿಲುಕಿದ್ದಾರೆ. ಅವರ ರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಿದ್ದು, ರಕ್ಷಣೆಗಾಗಿ 22 ಹೆಲಿಕಾಫ್ಟರ್ಗಳನ್ನು ಬಳಸಲಾಗುತ್ತಿದೆ ಎಂದು ಕೇಂದ್ರ ಗೃಹ ಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು ಹೇಳಿದ್ದಾರೆ.
ಪ್ರವಾಸಿಗರು ತಮ್ಮ ರಕ್ಷಣೆಗಾಗಿ ಉತ್ತರಖಂಡದ ಸುತ್ತ ಮುತ್ತಲಿನ ಬೆಟ್ಟ ಗುಡ್ಡಗಳಲ್ಲಿ ಆಶ್ರಯ ಪಡೆಯುತ್ತಿದ್ದು, ಸುಮಾರು 60 ಸಾವಿರ ಪ್ರವಾಸಿಗರು ಸಿಲುಕಿಕೊಂಡಿರುವುದಾಗಿ ಮಾಹಿತಿ ಇದೆ. ಆದಷ್ಟು ಬೇಗ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ. ಅದಕ್ಕಾಗಿ ಸದ್ಯ 22 ಹೆಲಿಕಾಫ್ಟರ್ಗಳನ್ನು ಘಟನಾಸ್ಥಳಕ್ಕೆ ರವಾನಿಸಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಹೆಲಿಕಾಫ್ಟರ್ಗಳನ್ನು ಬಳಸಲಾಗುವುದು ಎಂದು ಶಿಂಧೆ ತಿಳಿಸಿದ್ದಾರೆ.
ಉತ್ತರಖಂಡದ ಸುತ್ತ ಮುತ್ತಲು 22 ಹೆಲಿಕಾಫ್ಟರ್ಗಳು ಸಂಚರಿಸುತ್ತಿದ್ದು, ದುರ್ಗಮ ಪ್ರದೇಶಗಳಲ್ಲಿ ಆಶ್ರಯ ಪಡೆದಿರುವ ಪ್ರವಾಸಿಗರನ್ನು ಎಷ್ಟು ಸಾಧ್ಯವೊ ಅಷ್ಟು ಬೇಗ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯದಲ್ಲಿ ರಕ್ಷಣಾ ಸಿಬ್ಬಂದಿ ಸಕ್ರಿಯರಾಗಿದ್ದಾರೆ.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈಗ ಬಳಸಲಾಗುತ್ತಿರುವ ಹೆಲಿಕಾಫ್ಟರ್ಗಳು ಸಾಕಾಗುತ್ತಿಲ್ಲ. ಹೀಗಾಗಿ ರಕ್ಷಣಾ ಸಚಿವಾಯಕ್ಕೆ ಇನ್ನು ಹೆಚ್ಚಿನ ಹೆಲಿಕಾಫ್ಟರ್ಗಳನ್ನು ರಕ್ಷಣೆಗಾಗಿ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ರಕ್ಷಣಾ ಇಲಾಖೆ ಸಹ ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಹೆಚ್ಚಿನ ಹೆಲಿಕಾಫ್ಟರ್ಗಳನ್ನು ರಕ್ಷಣೆಗಾಗಿ ಬಳಸಲಾಗುತ್ತದೆ ಎಂದು ಶಿಂಧೆ ತಿಳಿಸಿದ್ದಾರೆ.
ಪ್ರವಾಹ ಹಾಗೂ ಭೂಕುಸಿತದಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಸಾವಿರಾರು ಪ್ರವಾಸಿಗರು ಸಿಲುಕಿದ್ದು, ಇನ್ನೂ ಸಾವಿರಾರು ಮಂದಿಯ ಸುಳಿವೇ ಸಿಗದ ಕಾರಣ ಈಗಲೇ ಮೃತ ಸಂಖ್ಯೆಯ ನಿರ್ದಿಷ್ಟ ಅಂಕಿ ಅಂಶಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಉತ್ತರಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರನ್ನು ಸಂಪರ್ಕಿಸಿದ್ದು, ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಇಂತಿಷ್ಟೇ ಎಂಬ ನಿರ್ದಿಷ್ಟ ಮಾಹಿತಿ ನೀಡಿಲು ಸಾಧ್ಯವಾಗುತ್ತಿಲ್ಲ ಎಂದು ಬಹುಗುಣ ಅವರು ತಿಳಿಸಿರುವುದಾಗಿ ಶಿಂಧೆ ಹೇಳಿದ್ದಾರೆ.
ಉತ್ತರಖಂಡದಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಲ್ಲಿ ಅಸುನೀಗಿದವರ ಸಂಖ್ಯೆ 150ಕ್ಕೆ ಏರಿದ್ದು, ಸಾವಿರಾರು ಮಂದಿ ಬೆಟ್ಟಗುಡ್ಡಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


