ವಿಪಕ್ಷಗಳು ಅಸ್ಥಿರತೆ ಮೂಡಿಸಲು ಯತ್ನಿಸುತ್ತಿವೆ: ಸೋನಿಯಾ

ಸುರತ್ಗರ್: ಕಾಂಗ್ರೆಸ್‌ನ ಬಹು ನಿರೀಕ್ಷಿತ ಆಹಾರ ಭದ್ರತೆ ಮಸೂದೆ ಅಂಗೀಕಾರಕ್ಕೆ ಸಹಕಾರ ನೀಡದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ವಿಪಕ್ಷಗಳು ದೇಶದಲ್ಲಿ ಅಸ್ತಿರತೆ ಉಂಟು ಮಾಡಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ಸುರತ್ಗರ್‌ನಲ್ಲಿ ಇಂದು ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೆಲವು ರಾಜಕೀಯ ಪಕ್ಷಗಳು ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸುತ್ತಿವೆ. ಆದರೆ ಇದರಿಂದ ಯಾವುದೇ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರು ಅಧಿಕಾರಕ್ಕಾಗಿ ಮಾತ್ರ ಇಂತಹ ಕೆಲಸ ಮಾಡುತ್ತಿದ್ದಾರೆ. ಇದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಪ್ರತಿಯೊಬ್ಬ ಪ್ರಜೆಗೂ ಆಹಾರ ಭದ್ರತೆ ಸಿಗುವಂತೆ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ ಇಂತಹ ಕಾರ್ಯಕ್ಕೆ ವಿಪಕ್ಷಗಳು ಸಹಕಾರ ನೀಡದೆ ಇರುವುದು ಮಸೂದೆ ಜಾರಿಗೆ ತರಲು ಸಾಧ್ಯವಿಲ್ಲ ಎಂದರು.
ಆಹಾರ ಭದ್ರತೆ ಮಸೂದೆಯನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರಿಯಾಗಿ ಆಡಳಿತ ನಿರ್ವಹಿಸಲು ಸಹಕರಿಸುತ್ತಿಲ್ಲ. ಜೊತೆಗೆ ದೇಶದಲ್ಲಿ ಅಸ್ತಿರತೆ ಉಂಟುಮಾಡಲು ಪ್ರಯತ್ನಿಸುತ್ತಿವೆ. ಇದು ಹೀಗೆ ಮುಂದುವರೆದರೆ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


