ಈಗಿನ ಸುದ್ದಿ

ನಾಳೆ ಉತ್ತರಾಖಂಡಕ್ಕೆ ಗೃಹ ಸಚಿವರ ಭೇಟಿ

Published On :

ನವದೆಹಲಿ: ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಉತ್ತರಾಖಂಡ ರಾಜ್ಯಕ್ಕೆ ಶನಿವಾರ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಭೇಟಿ ನೀಡಲಿದ್ದಾರೆ.

ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಉತ್ತರಾಖಂಡ ರಾಜ್ಯದಲ್ಲಿ ನಾಳೆ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಭೇಟಿ ನೀಡಲಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ಈ ಬಗ್ಗೆ ಸ್ವತಃ ಶಿಂಧೆ ಅವರು, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಉತ್ತರಾಖಂಡ ರಾಜ್ಯ ಸೇರಿದಂತೆ ಪ್ರವಾಹ ಪೀಡಿತ ರಾಜ್ಯಗಳಿಗೂ ತಾವು ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಶಿಂಧೆ, ಉತ್ತರಾಖಂಡ, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಪ್ರವಾಹದಿಂದಾಗಿ ಈವರೆಗೂ ಸುಮಾರು 205 ಜನ ಸಾವಿಗೀಡಾಗಿದ್ದಾರೆ. 10 ಸಾವಿರ ಪ್ರವಾಸಿಗರು ನಾಪತ್ತೆಯಾಗಿದ್ದು, ಸುಮಾರು 25 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ಅಲ್ಲದೆ ಅಪಾಯಕ್ಕೆ ಸಿಲುಕಿದ್ದ ಸುಮಾರು 34000 ಸಾವಿರಕ್ಕೂ ಅಧಿಕ ಮಂದಿಯನ್ನು ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. 50 ಸಾವಿರ ಮಂದಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ಶೀಘ್ರದಲ್ಲಿಯೇ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುವುದು ಎಂದು ಅವರು ತಿಳಿಸಿದರು.

ಅಂತೆಯೇ ನಾಳೆ ಉತ್ತರಾಖಂಡಕ್ಕೆ ತೆರಳಲಿರುವ ಶಿಂಧೆ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣ ದಳ(ಎನ್‌ಡಿಎಂಎ)ದೊಂದಿಗೆ ಸಭೆ ನಡೆಸಲಿದ್ದು, ಪ್ರಸಕ್ತ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.