ಒತ್ತಡಕ್ಕೆ ಮಣಿಯಲ್ಲ; ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಕೆ.ಜೆ ಜಾರ್ಜ್

ಉಡುಪಿ: ಯಾವುದೇ ಒತ್ತಡಕ್ಕೆ ಮಣಿಯದೇ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಗೈದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದಾರೆ.
ಉಡುಪಿಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರು. ಅಲ್ಲದೆ ಆಸ್ಪತ್ರೆಯಲ್ಲಿದ್ದ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. 'ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳ ಕೃತ್ಯ ಅಮಾನುಷವಾಗಿದ್ದು, ತಪ್ಪಿತಸ್ಥರನ್ನು ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ. ತಪ್ಪಿಸ್ಥರ ವಿರುದ್ಧ ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳುವುದಿಲ್ಲ. ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಮಣಿಪಾಲ ವಿಶ್ವವಿದ್ಯಾಲಯದ ಉಪ ಕುಲಪತಿ ಹೆಚ್.ಎಸ್.ಬಲ್ಲಾಳ್ ಅವರು, ಪೊಲೀಸರ ಸೂಚನೆಯ ಮೇರೆಗೆ ಶಿಕ್ಷಣ ಸಂಸ್ಥೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ ಅವರು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳ ಬಂಧನಕ್ಕೆ ಜಿಲ್ಲೆಯ ಆಟೋ ಯೂನಿಯನ್‌ಗಳ ಸಹಕಾರ ಕೋರಲಾಗಿದೆ. ಅಲ್ಲದೆ ಉಡುಪಿ ಜಿಲ್ಲೆಯ ಎಲ್ಲ ಆಟೋ ಚಾಲಕರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


