ಈಗಿನ ಸುದ್ದಿ

ಕಾಂಗ್ರೆಸ್ ಅನ್ನು ತಿರಸ್ಕರಿಸಿ: ನರೇಂದ್ರ ಮೋದಿ

ಕಾಂಗ್ರೆಸ್ ಅನ್ನು ತಿರಸ್ಕರಿಸಿ: ನರೇಂದ್ರ ಮೋದಿ
Published On :

ಪಠಾಣ್‌ಕೋಟ್: ಭ್ರಷ್ಟಾಚಾರ ಕೂಪವಾಗಿರುವ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದು ಗುಜರಾತ್ ಮುಖ್ಯಮಂತ್ರಿ ಮತ್ತು ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು, ಪಂಜಾಬ್‌ನ ಮಾಧೋಪುರದಲ್ಲಿ ನಡೆದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮರಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಂಗ್ರೆಸ್ ಅನ್ನು ಭ್ರಷ್ಟಾಚಾರ ಕೂಪ ಎಂದು ಕಿಡಿಕಾರಿದ ಮೋದಿ, ಸಮಾಜದ ಹಿತಕ್ಕಾಗಿ ಹೋರಾಡಿದ ಶ್ಯಾಮಪ್ರಸಾದ್ ಅವರನ್ನು ಹುತಾತ್ಮ ಎಂದು ಕರೆದರು. ಅಲ್ಲದೆ ಶ್ಯಾಮಪ್ರಸಾದ್ ಅವರಿಗೆ ಕಾಂಗ್ರೆಸ್ ಆ ಗೌರವವನ್ನೇ ನೀಡಲಿಲ್ಲ ಎಂದು ಮೋದಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

'ಪ್ರಸ್ತುತ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಕೈಯಲ್ಲಿ ಭಾರತ ದೇಶದ ರಕ್ಷಣೆ ಸಾಧ್ಯವಿಲ್ಲ. ದೇಶದ ಭವಿಷ್ಯವಾಗಿರುವ ಯುವಕರು ಕಾಂಗ್ರೆಸ್ ಪಕ್ಷದ ಕೈಯಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಉತ್ತರಾಖಂಡದಲ್ಲಿ ಸಾವಿರಾರು ಜನ ಸಾವಿಗೀಡಾಗಿದ್ದು, ಲಕ್ಷಾಂತರ ನಿರಾಶ್ರಿತರಾಗಿದ್ದಾರೆ. ಅಲ್ಲದೆ ಇಂದಿಗೂ ಸಾವಿರಾರು ಮಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅಲ್ಲಿ ಜೀವನ ನಡೆಸುತ್ತಿದ್ದ ಜನರು ಇದೀಗ ತಮ್ಮ ಎಲ್ಲ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇಂತಹ ಆತಂಕಕಾರಿ ಪರಿಸ್ಥಿತಿಯಲ್ಲಿಯೂ ಕಾಂಗ್ರೆಸ್ ಪಕ್ಷ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮೋದಿ ಕಿಡಿಕಾರಿದರು.

ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಮೋದಿ, ಪಂಜಾಬ್‌ನ ಮಾಧೋಪುರದಲ್ಲಿ ನಡೆದ ಜನತಾ ಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಅವರ 60ನೇ ಸ್ಮರಣ ದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ಸಮಾರಂಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತಿತ್ತರರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.