ಈಗಿನ ಸುದ್ದಿ

ಉತ್ತರಾಖಾಂಡನಲ್ಲಿ ಭಾರಿ ಮಳೆ: ರಕ್ಷಣಾ ಕಾರ್ಯ ಸ್ಥಗಿತ

ಉತ್ತರಾಖಾಂಡನಲ್ಲಿ ಭಾರಿ ಮಳೆ: ರಕ್ಷಣಾ ಕಾರ್ಯ ಸ್ಥಗಿತ
Published On :

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂತ್ರಸ್ತರ ರಕ್ಷಣೆ ಕಾರ್ಯಕ್ಕೆ ಅಡಚಣೆ ಉಂಟಾಗಿದ್ದು, ಉತ್ತರಾಖಂಡನ ಬೆಟ್ಟಗುಡ್ಡಗಳಲ್ಲಿ ಸುಮಾರು 13 ಸಾವಿರ ನೆರೆ ಸಂತ್ರಸ್ತರು ಸಿಲುಕಿರುವುದಾಗಿ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ರಕ್ಷಣಾ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಸಿಬ್ಬಂದಿಗಳ ರಕ್ಷಣಾ ಕಾರ್ಯಕ್ಕೆ ಸೋಮವಾರ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಅಡ್ಡಿ ಉಂಟು ಮಾಡಿದೆ. ಹೀಗಾಗಿ ಬೆಟ್ಟಗಳಲ್ಲಿ ಆಶ್ರಯಿಸಿರುವ ನೆರೆ ಸಂತ್ರಸ್ತರನ್ನು ತಲುಪಲು ಸಾಧ್ಯವಾಗಿತ್ತಿಲ್ಲ. ಇದರಿಂದಾಗಿ ಸುಮಾರು 13 ಸಾವಿರ ಮಂದಿಯ ರಕ್ಷಣೆಗೆ ತೊಡುಕುಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅತಿಯಾದ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅತಿ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿರುವ ಮಿಗ್-16 ಹೆಲಿಕಾಫ್ಟರ್ ತನ್ನ ಹಾರಾಟವನ್ನು ನಿಲ್ಲಿಸಿದೆ. ಮಳೆಯಲ್ಲೂ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಸಣ್ಣ ಹೆಲಿಕಾಫ್ಟರ್‌ಗಳು ಸಹ ಪ್ರತಿಕೂಲ ವಾತಾವರಣದಿಂದಾಗಿ ಜೋಶಿಮಠ ಹಾಗೂ ಹರ್ಶಿಲ್ ಕ್ಯಾಂಪ್‌ಗಳಿಗೆ ಮರಳಿವೆ ಎಂದರು.

ಉತ್ತರಾಖಂಡದಲ್ಲಿ 10 ದಿನಗಳಿಂದ ಸುರಿಯುತ್ತಿರುವ ಕುಂಭ-ದ್ರೋಣ ಮಳೆಯಿಂದಾಗಿ ಪವಿತ್ರ ಯಾತ್ರಾ ಕ್ಷೇತ್ರಗಳಾದ ಬದ್ರಿನಾಥ್ ಹಾಗೂ ಕೇದಾರನಾಥ್ ಪ್ರದೇಶಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪ್ರವಾಹಕ್ಕೆ ತುತ್ತಾಗಿದ್ದರು. ಅವರುಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ರಕ್ಷಣಾ ಕಾರ್ಯ ಸಿಬ್ಬಂದಿಗೆ ಇದೀಗ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಸಿಗರನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಮಳೆ ಹೀಗೆ ಮುಂದುವರೆದರೆ ಪರಿಹಾರ ಕಾರ್ಯ ವಿಳಂಬವಾಗಲಿದೆ ಎಂದರು.

ಮಳೆಯಿಂದಾಗಿ ರಕ್ಷಣಾ ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ನಿಂತ ತಕ್ಷಣದಿಂದ ಪರಿಹಾರ ಕಾರ್ಯ ಚುರುಕುಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನೆರೆ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ಭಾರತೀಯ ಸೇನೆ, ವಾಯುಪಡೆ ಹಾಗೂ ಇಂಡೊ-ಟಿಬೇಟಿಯನ್ ಬಾರ್ಡರ್ ಪೊಲೀಸರು ತೊಡಗಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.