ಈಗಿನ ಸುದ್ದಿ

ಹೆಲಿಕಾಪ್ಟರ್ ಪತನ: 20 ಮೃತದೇಹಗಳು ಪತ್ತೆ

Published On :

ಉತ್ತರಾಖಂಡ್: ಪ್ರವಾಹ ಸಂತ್ರಸ್ತರನ್ನು ಹೊತ್ತು ಬರುತ್ತಿದ್ದ ರಕ್ಷಣಾ ಪಡೆಯ ಹೆಲಿಕಾಪ್ಟರ್ ಪತನದಿಂದಾಗಿ ಮೃತಪಟ್ಟ 20 ಅಧಿಕಾರಗಳ ಮೃತದೇಹ ಬುಧವಾರ ಪತ್ತೆಯಾಗಿದೆ.

ಗೌರಿಕುಂಡ್ ಬಳಿ ಪತನಗೊಂಡಿದ್ದ ಎಂಐ 17 ಹೆಲಿಕಾಫ್ಟರ್‌ನಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಮೃತಪಟ್ಟಿದ್ದು, 20 ಮೃತದೇಹಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಕೇದಾರನಾಥದಿಂದ ವಾಪಸ್ ಬರುತ್ತಿದ್ದ ವೇಳೆ ಈ ಕಾಪ್ಟರ್ ಪತನವಾಗಿತ್ತು. ಕಾಪ್ಟರ್‌ನಲ್ಲಿ ಎನ್‌ಡಿಆರ್‌ಎಫ್, ಐಟಿಬಿಪಿ ಐಎಎಫ್ ಸಿಬ್ಬಂದಿ ಇದ್ದರು. ಹೆಲಿಕಾಪ್ಟರ್ ಪತನಕ್ಕೆ ಕೆಟ್ಟ ಹವಮಾನ ಕಾರಣ ಎಂದು ಐಎಎಫ್ ಹೇಳಿದೆ.

ಇದೇ ವೇಳೆ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಮುಗಿಯುವವರೆಗೂ ನಮ್ಮ ಅಧಿಕಾರಿಗಳು ವಿಶ್ರಾಂತಿ ಪಡೆಯುವುದಿಲ್ಲ ಎಂದು ಭಾರತೀಯ ವಾಯು ಪಡೆ(ಐಎಎಫ್) ಮುಖ್ಯಸ್ಥ ಎನ್‌ಎಕೆ ಬ್ರೌನ್ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.