ಇಂದಿನಿಂದ ಅಮರನಾಥ ಯಾತ್ರೆ ಆರಂಭ
ಜಮ್ಮು: ಅಮರನಾಥ ಆರಂಭವಾಗಿದ್ದು, ಜಮ್ಮುವಿನಿಂದ 3000 ಭಕ್ತಾದಿಗಳು ಗುರುವಾರ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ.
563 ಮಹಿಳೆಯರು, 37 ಮಕ್ಕಳು ಸೇರಿದಂತೆ ಒಟ್ಟು 3ಸಾವಿರ ಯಾತ್ರಾದಿಗಳು ಕಾಶ್ಮೀರದಲ್ಲಿರುವ ಅಮರನಾಥ ಗುಹಾಂತರ ದೇವಾಲಯಕ್ಕೆ ತೆರಳಿದ್ದಾರೆ.
ಪೂರ್ಣ ಭದ್ರತೆಯೊಂದಿಗೆ ಇಂದು ಬೆಳಿಗ್ಗೆ 5.45 ಸಮಯದಲ್ಲಿ ಭಕ್ತಾದಿಗಳು ಯಾತ್ರೆಗೆ ಹೊರಟಿದ್ದಾರೆ.
ಭಯೋತ್ಪಾದಕರೂ ದಾಳಿ ಮಾಡುವ ಸಾಧ್ಯತೆಯಿದೆ ಎಂದು ಗೃಹ ಇಲಾಖೆ ಎಚ್ಚರಿಕೆ ನೀಡಿದ್ದು, ಪೂರ್ಣ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ದಿನ 15,000 ಯಾತ್ರಾದಿಗಳು ಮಾತ್ರ ಅಮರನಾಥ ಗುಹಾಂತರ ದೇವಾಲಯದ ಶಿವನ ದರ್ಶನ ಪಡೆಯಬಹುದು ಎಂದು ಪ್ರವಾಸೋದ್ಯಮದ ಅಧಿಕಾರಿ ಹೇಳಿದ್ದಾರೆ.
ಭಯೋತ್ಪಾದಕರೂ ಯಾವುದೇ ಕ್ಷಣದಲ್ಲಿ ದಾಳಿ ಮಾಡಬಹುದಾಗಿದ್ದು, ಯಾತ್ರಾದಿಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾತ್ರಿಕರು ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊರಗಡೆಯಿಂದ ಬರುವ ವಾಹನಗಳು ಲಖನಪುರ್ ಗಡಿ ಭಾಗದಲ್ಲೇ ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

