ಈಗಿನ ಸುದ್ದಿ

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸೂರಜ್ ಬಂಧನಾವಧಿ ವಿಸ್ತರಣೆ

Published On :

ಮುಂಬೈ: ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜಿಯಾ ಖಾನ್ ಬಾಯ್‌ಫ್ರೆಂಡ್ ಸೂರಜ್ ಪಂಚೋಲಿ ನ್ಯಾಯಾಂಗ ಬಂಧನಾವಧಿಯನ್ನು ಜುಲೈ 11ರ ವರೆಗೆ ನ್ಯಾಯಾಲಯ ವಿಸ್ತರಿಸಿದೆ.

ಬಾಲಿವುಡ್ ನಟ ಅದಿತ್ಯಾ ಪಂಚೋಲಿಯವರ ಪುತ್ರ ಹಾಗೂ ಜಿಯಾ ಖಾನ್ ಬಾಯ್‌ಫ್ರೆಂಡ್ ಸೂರಜ್ ಪಂಚೋಲಿಯನ್ನು ಇಂದು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದರು.

ಜಿಯಾ ಖಾನ್ ಆತ್ಮಹತ್ಯೆಗೂ ತಮಗೂ ಯಾವುದೇ ಸಂಬಂಧವಿಲ್ಲ. ನಾನು ನಿರಪರಾಧಿ ತಮಗೆ ಜಾಮೀನು ನೀಡಿ ಎಂದು ಸೂರಜ್ ಪಂಚೋಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಸೂರಜ್ ಪಂಚೋಲಿ ಪ್ರಭಾವ ಶಾಲಿಯಾಗಿದ್ದು, ಸಾಕ್ಷಿಗಳು ನಾಶಪಡಿಸಬಹುದು ಆದ್ದರಿಂದ ಜಾಮೀನು ನೀಡಬಾರುದು ಎಂದು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 11ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.

ಇದನ್ನು ಪ್ರಶ್ನಿಸಿ ಸೂರಜ್ ಪಂಚೋಲಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಸ್ತುತ ಸೂರಜ್ ಪಂಚೋಲಿ ಅರ್ತೂರ್ ಕೇಂದ್ರ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.