ರಾಜ್ಯದಲ್ಲಿ ಎಫ್ಡಿಐ ಜಾರಿಗೆ ಸಿಎಂ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಚಿಲ್ಲರೆ ವ್ಯಾಪಾರದಲ್ಲಿ ಶೇ.51ರಷ್ಟು ವಿದೇಶ ನೇರ ಬಂಡವಾಳ ಹೂಡಿಕೆ(ಎಫ್ಡಿಐ)ಗೆ ಒಪ್ಪಿಗೆ ಸೂಚಿಸಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದ ಪ್ರೆಸ್ಕ್ಲಬ್ನಲ್ಲಿ ವರದಿಗಾರರ ಕೂಟ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಎಫ್ಡಿಐಗೆ ಅವಕಾಶ ನೀಡುವುದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ಯಾವುದೆ ತೊಂದರೆಯಾಗುವುದಿಲ್ಲ. ಇದರಿಂದ ಮತ್ತಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಈ ವೇಳೆ ಮಣಿಪಾಲ ವೈದ್ಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪೊಲೀಸರು ಪ್ರಮಾಣಿಕವಾಗಿ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಒಂದೆರೆಡು ದಿನದಲ್ಲಿ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.
ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳ ಶೀಘ್ರ ವಿಲೇವಾರಿಗೆ 10 ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದರು. ಅಲ್ಲದೆ ಲೈವ್ ಬ್ಯಾಂಡ್ಗಳಲ್ಲಿ ನಡೆಯುವ ಅಕ್ರಮಗಳ ತಡೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಇನ್ನು ಆರು ತಿಂಗಳಲ್ಲಿ ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದಾಗಿ ಸಿಎಂ ಭರವಸೆ ನೀಡಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇದೆ. ವಿದ್ಯುತ್ ಕೊರತೆ ನೀಗಿಸಲು ಮುಂದಿನ ಎರಡು ವರ್ಷಗಳಲ್ಲಿ 4700 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಈ ಸಂಬಂಧ 5 ಹೊಸ ವಿದ್ಯುತ್ ಯೋಜನೆಗಳ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ ಮತ್ತು ವಿದ್ಯುತ್ ಸಾಗಣೆ, ವಿತರಣಾ ನಷ್ಟವನ್ನು ಈಗಿರುವ ಶೇ.18.7ರಿಂದ ಶೇ.15ಕ್ಕೆ ಇಳಿಸುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇನ್ನು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕಲಂ 371 ಜಾರಿ ಬಗ್ಗೆ ಪ್ರತಿಕ್ರಿಸಿದ ಸಿಎಂ, ಸಂಪುಟ ಸಮಿತಿ ವರದಿ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


