ಈಗಿನ ಸುದ್ದಿ

ಪ್ರಧಾನಿ ಅಭ್ಯರ್ಥಿಗೆ ರಾಹುಲ್ ಸೂಕ್ತ ವ್ಯಕ್ತಿ: ಶೀಲಾ ದೀಕ್ಷಿತ್

Published On :

ನವದೆಹಲಿ: 2014ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೂಕ್ತ ವ್ಯಕ್ತಿ ಎಂದು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಶ್ರಮ ವಹಿಸಿ ದುಡಿಯಬೇಕು. ರಾಹುಲ್ ಪ್ರಧಾನಿಯಾಗುವಂತೆ ಕಾರ್ಯಕರ್ತರು ದುಡಿಯಬೇಕಾಗಿದೆ ಎಂದು ಸೂಚಿಸಿದ್ದಾರೆ.

ದೇಶಕ್ಕಾಗಿ ಸೋನಿಯಾ ಗಾಂಧಿಯವರು ದುಡಿದು, ತ್ಯಾಗ ಮಾಡಿದ್ದಾರೆ. ಅವರ ಸಮವಾಗಿ ರಾಹುಲ್ ಗಾಂಧಿ ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಶೀಲಾ ದೀಕ್ಷಿತ್ ಹೇಳಿದ್ದಾರೆ.

ಬಿಜೆಪಿ, ಆರ್‌ಜೆಡಿ ಅಥವಾ ಜನತಾ ದಳ ಪಕ್ಷಗಳು ಅಧಿಕಾರಕ್ಕೆ ಬಂದರೆ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅನೇಕ ಕೊಡುಗೆ ನೀಡಿದೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಸೋನಿಯಾ ಅವರು ಉತ್ತಮ ಪಾತ್ರ ವಹಿಸಿದ್ದಾರೆ ಎಂದು ಶೀಲಾ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.