ಈಗಿನ ಸುದ್ದಿ

ಸರ್ಕಾರ ಸಿಬಿಐಗೆ ಹೆಚ್ಚಿನ ಅಧಿಕಾರ ನೀಡಿದೆ: ನಾರಾಯಣಸ್ವಾಮಿ

Published On :

ನವದೆಹಲಿ: ಸಿಬಿಐಗೆ ಸ್ವಾಯತ್ತೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ವಿತ್ತ ಸಚಿವ ಪಿ.ಚಿದಂಬರಂ ನೇತೃತ್ವದ ಸಚಿವರ ಸಮಿತಿ ನೀಡಿದ್ದ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದ್ದು, ಇನ್ನುಮುಂದೆ ಸಿಬಿಐಗೆ ಹೆಚಿನ ಅಧಿಕಾರ ಸಿಗಲಿದೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಸಿಬಿಐಗೆ ಸ್ವಾಯತ್ತೆ ಸೇರಿದಂತೆ ಹೆಚ್ಚಿನ ಅಧಿಕಾರ ನೀಡುವ ಸಂಬಂಧ ನಾವು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿ, ಬಳಿಕ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ನಾರಾಯಣಸ್ವಾಮಿ ತಿಳಿಸಿದರು.

ಸಿಬಿಐಗೆ ಸ್ವಾಯತ್ತೆ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದರಂತೆ ಭವಿಷ್ಯದಲ್ಲಿ ಸಿಬಿಐ ನಿರ್ದೇಶಕರನ್ನು ಉನ್ನತ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು. ಸಮಿತಿಯಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೂ ಸಮಾನ ಅಧಿಕಾರ ಸಿಗಲಿದೆ. ಅಲ್ಲದೆ, ಸಿಬಿಐಗೆ ಹಣಕಾಸು ಸ್ವಾಯತ್ತೆ ನೀಡುವ ಪ್ರಸ್ತಾಪಕ್ಕೂ ಸರ್ಕಾರದ ಒಪ್ಪಿಗೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.