ಈಗಿನ ಸುದ್ದಿ

ಮಂಡಿಯಲ್ಲಿ ಸ್ಥಾನ ಉಳಿಸಿಕೊಂಡ ಕಾಂಗ್ರೆಸ್

Published On :

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಸಂಸದೀಯ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪರಾಭವಗೊಳಿಸಿದೆ.

ಮಂಡಿ ಕ್ಷೇತ್ರದಲ್ಲಿ ಜೂನ್ 23 ಮತ್ತು 27ರಂದು ನಡೆದ ಉಪಚುನಾವಣೆ ಮತ ಎಣಿಕೆ ಭಾನುವಾರ ನಡೆಸಲಾಗಿದ್ದು, ಕಾಂಗ್ರೆಸ್ ಜಯಶಾಲಿಯಾಗಿದೆ.

ಭಾರತೀಯ ಜನತಾ ಪಕ್ಷವನ್ನು 1.36 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ ಕಾಂಗ್ರೆಸ್‌ನ ಅಭ್ಯರ್ಥಿ ಪ್ರತಿಭಾ ಸಿಂಗ್ ಜಯದ ನಗೆ ಬೀರಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಾಸಕ ಮತ್ತು ಮಾಜಿ ಸಚಿವ ಜೈ ರಾಮ್ ಠಾಕೂರ್ ಅವರಿಗೆ ಸೋಲುಂಟಾಗಿದೆ.

ಜಯಗಳಿಸಿರುವ ಪ್ರತಿಭಾ ಸಿಂಗ್ ಮತ್ತು ಅವರ ಪತಿ, ಮುಖ್ಯಮಂತ್ರಿ ವೀರ್‌ಭದ್ರಾ ಸಿಂಗ್ ಅವರು ಮತದಾರರಿಗೆ ವಂದನೆಗಳನ್ನು ತಿಳಿಸಿದ್ದಾರೆ.

ಮತದಾರರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಿದ್ದಾರೆ. ಅವರ ನಂಬಿಕೆ ಉಳಿಸುವುದೇ ನಮ್ಮ ಮುಂದಿನ ಕೆಲಸವಾಗಿದೆ. ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಿದ್ದು, ಈಗಿನ ಉತ್ಸಾಹದಲ್ಲೇ ದುಡಿಯಲಿದೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.