ಸಿಬಿಐನ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಾಂಗ್ರೆಸ್: ರಾಜನಾಥ್ ಸಿಂಗ್
ನವದೆಹಲಿ: ಕೇಂದ್ರ ತನಿಖಾ ತಂಡ(ಸಿಬಿಐ) ಹಾಗೂ ಸಂವಿಧಾನದ ಅಧಿಕಾರವನ್ನು ಕಾಂಗ್ರೆಸ್ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಸಿಬಿಐನ್ನು ದುರಪಯೋಗ ಪಡಿಸಿಕೊಳ್ಳುತ್ತಿರುವುದು ದೇಶದಲ್ಲಿರುವ ಎಲ್ಲಾ ಜನತೆಗೆ ಗೊತ್ತಿದೆ. ಕೇವಲ ಸಿಬಿಐ ಮಾತ್ರವಲ್ಲದೇ ದೇಶದಲ್ಲಿರುವ ಸಂವಿಧಾನದ ಆಡಳಿತವನ್ನೂ ದುರಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ಇಶ್ರತ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಪ್ರಕರಣದ ಬಗ್ಗೆ ಹೆಚ್ಚು ತಿಳಿದಿದೆ ಎಂದು ಸಿಬಿಐ ಕಲೆ ಹಾಕಿರುವ ಸಾಕ್ಷಿಗಳಲ್ಲಿ ಕಂಡುಬಂದಿದೆ ಎಂದು ಕಾಂಗ್ರೆಸ್ ಹೇಳಿತ್ತು.
ಇದಕ್ಕೆ ತಿರುಗೇಟು ನೀಡಿರುವ ರಾಜನಾಥ್ ಸಿಂಗ್ ಕಾಂಗ್ರೆಸ್ ಸಿಬಿಐ ಮತ್ತು ಸಂವಿಧಾನದ ಆಡಳಿತಗಳನ್ನು ದುರಪಯೋಗ ಪಡಿಸಿಕೊಳ್ಳುತ್ತಿದ್ದು, ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯಾದ 19 ವರ್ಷ ವಯಸ್ಸಿನ ಇಶ್ರತ್, ಜಾವೇದ್ ಶೇಖ್ ಅಲಿಯಾಸ್ ಪ್ರಾಣೇಶ್ ಪಿಳ್ಳೈ, ಅಮ್ಜದ್ ಪಿಳ್ಳೈ ಮತ್ತು ಝೀಶಾನ್ ಜೊಹಾರ್ ಅವರುಗಳನ್ನು ಗುಜುರಾತ್ ಪೊಲೀಸರು ನಕಲಿ ಎನ್ಕೌಂಟರ್ ಹೆಸರಿನಲ್ಲಿ ಹತ್ಯೆ ಮಾಡಿದ್ದರು.
ಪ್ರಕರಣದ ತನಿಖೆ ನಡೆಸುವಂತೆ ಹೈಕೋರ್ಟ್ ಸಿಬಿಐಗೆ ಆದೇಶಿಸಿತ್ತು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಉದ್ದೇಶ ಪೂರ್ವಕವಾಗಿಯೇ ಪ್ರಕರಣದಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

