ಕಲ್ಮಾಡಿಗೆ ಸೋಲು, ಅಲ್-ಹಮದ್ 'ಎಎಎ' ನೂತನ ಅಧ್ಯಕ್ಷ

ಪುಣೆ: ನಾಲ್ಕನೇ ಬಾರಿ ಏಷಿಯನ್ ಅಥ್ಲೆಟಿಕ್ಸ್ ಸಂಸ್ಥೆಯ(ಎಎಎ) ಅಧ್ಯಕ್ಷರಾಗಬೇಕು ಎಂಬ ಕಾಮನ್ವೆಲ್ತ್ ಹಗರಣದ ಪ್ರಮುಖ ಆರೋಪಿ ಸುರೇಶ್ ಕಲ್ಮಾಡಿ ಅವರ ಕನಸು ಭಗ್ನವಾಗಿದೆ. ಎಎಎ ಅಧ್ಯಕ್ಷ ಹುದ್ದೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಲ್ಮಾಡಿ ಸೋಲು ಅನುಭವಿಸಿದ್ದು, ದಹ್ಲನ್ ಜುಮಾನ್ ಅಲ್-ಹಮದ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
2000ರಲ್ಲಿ ಮೊದಲ ಬಾರಿಗೆ ಕ್ರೀಡಾ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಲ್ಮಾಡಿ ಅವರು ಮತ್ತೆ ಎರಡು ಬಾರಿ ಮರು ಆಯ್ಕೆಯಾಗಿದ್ದರು. ಆದರೆ ಈ ಬಾರಿ ಸೋಲು ಅನುಭವಿಸುವ ಮೂಲಕ ತಮ್ಮ ಬಳಿ ಇದ್ದ ಏಕೈಕ ಕ್ರೀಡಾ ಸಂಸ್ಥೆಯ ಹುದ್ದೆಯನ್ನು ಕಳೆದುಕೊಂಡಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು 45 ಮತಗಳ ಪೈಕಿ ಹಾಲಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಅವರು 18 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಅಲ್-ಹಮದ್ ಅವರು 20 ಮತಗಳನ್ನು ಪಡೆಯುವ ಮೂಲಕ ಅಥ್ಲೆಟಿಕ್ಸ್ ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾದರು. ಇನ್ನು ಏಳು ಮತಗಳು ತಿರಸ್ಕೃತಗೊಂಡಿವೆ.
ಕಾಮನ್ವೆಲ್ತ್ ಗೇಮ್ಸ್ ಹಗರಣದಲ್ಲಿ ಜೈಲು ಪಾಲಾಗಿದ್ದ ಕಲ್ಮಾಡಿ, ನಂತರ ಜಾಮೀನನ ಮೇಲೆ ಹೊರಗೆ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


