ಈಗಿನ ಸುದ್ದಿ

ಅಪ್ರಾಪ್ತೆ ಅತ್ಯಾಚಾರ: 200 ಜನರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ

Published On :

ನವದೆಹಲಿ: ಸರ್ಕಾರಿ ಶಾಲೆಯಲ್ಲಿ ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 200 ಜನರನ್ನು ಪೊಲೀಸರು ಭಾನುವಾರ ವಿಚಾರಣೆಗೊಳಪಡಿಸಲಿದ್ದಾರೆ.

ಶನಿವಾರ ಉಪಆಯುಕ್ತ ಬಿ.ಎಸ್ ಜೈಸ್‌ವಾಲ್ ಅವರು ಮಾತನಾಡಿ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ಸುಮಾರು 200ಜನರನ್ನು ನಾಳೆ ವಿಚಾರಣೆಗೊಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ 7 ವರ್ಷದ ಬಾಲಿಕಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ. ಬಾಲಿಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಈಗಾಗಲೇ ತನಿಖೆ ಆರಂಭಿಸಿರುವ ಪೊಲೀಸರು ಬಾಲಕಿಯ ಹೇಳಿಕೆಯನ್ನು ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಸಿಬ್ಬಂದಿ, ಶಿಕ್ಷಕರು ಸೇರಿದಂತೆ ಇತರೆ ವ್ಯಕ್ತಿಗಳನ್ನು ನಾಳೆ ವಿಚಾರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.