ಈಗಿನ ಸುದ್ದಿ

ಹೈ ಸ್ಫೋಟ ತನಿಖೆ: ಪೊಲೀಸ್ -ಎನ್‌ಐಎ ನಡುವೆ ಹಗ್ಗಜಗ್ಗಾಟ

Published On :

ಹೈದ್ರಾಬಾದ್: ಹೈದ್ರಾಬಾದ್ ಅವಳಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತು ಹೈದ್ರಾಬಾದ್ ಪೊಲೀಸರ ನಡುವೆ ತನಿಖೆಯ ಬಗ್ಗೆ ಹಗ್ಗಜಗ್ಗಾಟ ಉಂಟಾಗಿದೆ.

ಎನ್‌ಐಎ ಮತ್ತು ಹೈದ್ರಾಬಾದ್ ಪೊಲೀಸರ ನಡುವೆ ಅಸಹಕಾರ ಹೆಚ್ಚಾಗಿದ್ದು, ತನಿಖೆ ನಡೆಸಲು ಹಗ್ಗಜಗ್ಗಾಟ ನಡೆಯುತ್ತಿದೆ.

ದಿಲ್‌ಕುಶ್‌ನಗರ ಅವಳಿ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸುವಂತೆ ಕೇಂದ್ರ ಗೃಹ ಸಚಿವಾಲಯ ಆಂಧ್ರಪ್ರದೇಶದ ಸರ್ಕಾರಕ್ಕೆ ಸೂಚಿಸಿತ್ತು.

ಆದರೆ ಇದಕ್ಕೆ ಒಪ್ಪದ ಹೈದ್ರಾಬಾದ್ ಪೊಲೀಸರು ಸ್ಫೋಟದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾವಣೆ ಮಾಡಿದೆ. ಘಟನೆ ಬಗ್ಗೆ ತನಿಖೆ ನಡೆಸಲು 15 ಪೋಲೀಸ್ ತಂಡವನ್ನು ರಚಿಸಲಾಗಿದೆ.

ಪ್ರಸಕ್ತ ವಿಷಯ ಎನ್‌ಐಎ ಮತ್ತು ರಾಜ್ಯ ಪೊಲೀಸರ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಸ್ಫೋಟ ಸಂಭವಿಸಿದ ದಿನದಿಂದಲೇ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲು ಎನ್‌ಐಎ ಉತ್ಸುಕವಾಗಿತ್ತು. ಮಾತ್ರವಲ್ಲದೆ ತಮ್ಮ ಅಸಹನೆಯ ಬಗ್ಗೆ ಎನ್‌ಐಎ ಕೇಂದ್ರ ಸಚಿವಾಲಯಕ್ಕೆ ದೂರು ನೀಡಿದ್ದು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಕಿರಣ್‌ಕುಮಾರ್ ರೆಡ್ಡಿ ಅವರ ಗಮನಕ್ಕೆ ತಂದಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಿರುವ ಎನ್‌ಐಎ ಅಧಿಕಾರಿಗಳು ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದೆ. ಆದರೆ ರಾಜ್ಯ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದೆ. ಇದರಲ್ಲಿ ಯಾರು ಮೇಲುಗೈ ಎಂಬುದು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.