ಬಾಂಗ್ಲಾ: ಪ್ರಣಬ್ ತಂಗಿದ್ದ ಹೋಟೆಲ್ ಬಳಿ ಬಾಂಬ್ ಸ್ಪೋಟ
ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಂಗಿರುವ ಹೋಟೆಲ್ ಆವರಣದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಗೊಂಡಿದೆ.
3 ದಿನಗಳ ಪ್ರವಾಸ ನಿಮಿತ್ತ ಢಾಕಾದ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಂಗಿದ್ದು, ಪ್ರತಿಭಟನಾಕಾರರು ಪ್ರಣಬ್ ತಂಗಿರುವ ಹೋಟೆಲ್ ಬಳಿಯಲ್ಲಿಯೇ ಕಡಿಮೆ ತೀವ್ರತೆಯ ಪೆಟ್ರೋಲ್ ಬಾಂಬ್ ಅನ್ನು ಸ್ಫೋಟಗೊಳಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಪ್ರಣಬ್ ಮುಖರ್ಜಿ ಅವರು ತಂಗಿರುವ ಢಾಕಾದ 'ಪ್ಯಾನ್ ಫೆಸಿಫಿಕ್ ಹೋಟೆಲ್' ಬಳಿ ಇಂದು ಮಧ್ಯಾಹ್ನ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ನಲ್ಲಿ ಬಂದು ಬ್ಯಾಗ್ ಒಂದನ್ನು ಎಸೆದು ಹೋದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದೀಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಒದಗಿಸಲಾಗಿರುವ ಭದ್ರತೆಯನ್ನು ಹೆಚ್ಚಿಸಿದ್ದು, ಪ್ರಣಬ್ ಮುಖರ್ಜಿ ಅವರಿಗೆ ಬೇರೆ ಹೋಟೆಲ್ ವ್ಯವಸ್ಥೆ ಮಾಡಲು ಅಧಿಕಾರಿಗಳು ಚಿಂತಿಸುತ್ತಿದ್ದಾರೆ.
1971ರ ಬಾಂಗ್ಲಾ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸಂದರ್ಭದಲ್ಲಿ ಯುದ್ಧ ಅಪರಾಧದಲ್ಲಿ ಪಾಲ್ಗೊಂಡಿದ್ದ, ಜಮಾತ್ ಇ ಇಸ್ಲಾಮಿ ಸಂಘಟನೆಯ ಮೂವರನ್ನು ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದ ಅನ್ವಯ ಕಳೆದ ವಾರ ಗಲ್ಲಿಗೇರಿಸಲಾಗಿತ್ತು. ಇದನ್ನು ವಿರೋಧಿಸಿ ಜಮಾತ್ ಇ ಇಸ್ಲಾಮಿ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇದುವರೆಗೂ ಒಟ್ಟು 12 ಮಂದಿ ಸಾವಿಗೀಡಾಗಿದ್ದಾರೆ. ಬಾಂಗ್ಲಾದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

