ಬೃಹತ್ ಮೊತ್ತ ಪೇರಿಸಿ ಭಾರತ ಆಲೌಟ್

ಹೈದರಾಬಾದ್: ಹೈದರಾಬಾದಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿ ಆಲೌಟ್ ಆಗಿದೆ.
ಆರಂಭಿಕ ಆಟಗಾರ ವೀರೆಂದ್ರ ಸೆಹ್ವಾಗ್ ಅವರು ಇನ್ನಿಂಗ್ಸ್ ಆರಂಭದಲ್ಲಿಯೇ ಔಟಾದರೂ ದೃತಿಗೆಡದ ಭಾರತದ ಬ್ಯಾಟ್ಸಮನ್‌ಗಳು, ಆಸ್ಟ್ರೇಲಿಯಾ ಬೌಲರ್‌ಗಳ ಮೇಲೆ ಸವಾರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುರಳಿ ವಿಜಯ್ ಅವರ ಶತಕ ಮತ್ತು ಚೇತೇಶ್ವರ ಪೂಜಾರ ಅವರ ಅತ್ಯಮೂಲ್ಯ ದ್ವಿಶತಕದ ನೆರವಿನಿಂದ ಭಾರತ ತಂಡ 503 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧ 266ರನ್‌ಗಳ ಮುನ್ನಡೆ ಪಡೆದುಕೊಂಡಿದೆ.
ದಾಖಲೆಯ ಜೊತೆಯಾಟ ಆಡಿದ ಮುರಳಿ ವಿಜಯ್ ಮತ್ತು ಪೂಜಾರ ಜೋಡಿ 2ನೇ ಟೆಸ್ಟ್‌ನಲ್ಲಿ ಭಾರತ ಬಿಗಿ ಹಿಡಿತ ಸಾಧಿಸಲು ನೆರವಾದರು. ತಂಡದ ಮೊತ್ತ 387 ರನ್ ಆಗಿದ್ದಾಗ 167 ರನ್ ಗಳಿಸಿದ್ದ ವಿಜಯ್, ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ಕೋವನ್ ಅವರಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ನಂತರ ಪೂಜಾರ ಕೂಡ 204 ರನ್ ಮತ್ತು ಸಚಿನ್ ತೆಂಡೂಲ್ಕರ್ ಕೇವಲ 7 ರನ್‌ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಮತ್ತು ನಾಯಕ ಮಹೇಂದ್ರಸಿಂಗ್ ಧೋನಿ ಇನ್ನಿಂಗ್ಸ್ ಕಟ್ಟಲು ಮುಂದಾದರು. ಆದರೆ ಈ ಹಂತದಲ್ಲಿ ಬೌಲಿಂಗ್‌ಗೆ ಇಳಿದ ಮ್ಯಾಕ್ಸ್‌ವೆಲ್ ಅದ್ಭುತ್ ಬೌಲಿಂಗ್ ಮಾಡಿ ಕೊಹ್ಲಿ ಮತ್ತು ಧೋನಿ ಅವರ ವಿಕೆಟ್ ಪಡೆದರು. ನಂತರ ಭಾರತ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಧೋನಿ ನಂತರ ಬಂದ ಭಾರತದ ಬಾಲಂಗೊಚಿಗಳು ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.
ಒಟ್ಟಾರೆ ಆಸ್ಟ್ರೇಲಿಯಾ ವಿರುದ್ಧ ಭಾರತ ಬೃಹತ್ ಮೊತ್ತ ಪೇರಿಸಿದೆ. ಇದೀಗ ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಆಸ್ಚ್ರೇಲಿಯಾ ತಂಡ ಇತ್ತೀಚಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೆ 24 ರನ್‌ಗಳಿಸಿತ್ತು. ಕೋವನ್ ಮತ್ತು ಡೇವಿಡ್ ವಾರ್ನರ್ ಕ್ರೀಸ್ ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


