ಈಗಿನ ಸುದ್ದಿ

ಪೊಲೀಸ್ ಥಳಿತ ಪ್ರಕರಣ: ಪಂಜಾಬ್, ಬಿಹಾರಕ್ಕೆ ಸುಪ್ರೀಂ ನೋಟಿಸ್

ದಲಿತ ಮಹಿಳೆ, ಆಕೆಯ ತಂದೆ ಹಾಗೂ ಶಿಕ್ಷಕರಿಗೆ ಥಳಿಸಲಾಗಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿ ಸುಪ್ರೀಂ ಕೋರ್ಟ್...

Published On :

ನವದೆಹಲಿ: ದಲಿತ ಮಹಿಳೆ, ಆಕೆಯ ತಂದೆ ಹಾಗೂ ಶಿಕ್ಷಕರಿಗೆ ಥಳಿಸಲಾಗಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿ ಸುಪ್ರೀಂ ಕೋರ್ಟ್ ಬುಧವಾರ ಪಂಜಾಬ್ ಹಾಗೂ ಬಿಹಾರ ರಾಜ್ಯಗಳ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಮಾಡಿದೆ.

ನ್ಯಾಯಮೂರ್ತಿ ಜಿ.ಎಸ್.ಸಿಂಗ್ವಿ ಮತ್ತು ರಾಜಣ್ಣ ಪ್ರಕಾಶ್ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠ, ಪಂಜಾಬ್ ಹಾಗೂ ಬಿಹಾರ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿ ನೋಟಿಸ್ ಜಾರಿ ಮಾಡಿದೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಚಿತ್ರಗಳನ್ನು ಆಧರಿಸಿ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಈ ಎರಡು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.

ಪಂಜಾಬ್‌ನಲ್ಲಿ ದಲಿತ ಮಹಿಳೆ ಹಾಗೂ ಆಕೆಯ ತಂದೆಯನ್ನು ಪೊಲೀಸರು ಥಳಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ನಂತರ ಯುವತಿ ತನ್ನ ಮೇಲೆ ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಸೋಮವಾರ ತರಾಣ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.

ಇನ್ನೊಂದು ಪ್ರಕರಣದಲ್ಲಿ ಹುದ್ದೆ ಖಾಯಂಗೊಳಿಸುವಂತೆ ಆಗ್ರಹಿಸಿ ಮಹಿಳಾ ಶಿಕ್ಷಕ್ಷಿಯರು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕರರ ಮೇಲೆ ಲಾಠಿಚಾರ್ಚ್ ನಡೆಸಿದ್ದರು. ಈ ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.