ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮ ಕಂಡುಬಂದರೆ ಕಠಿಣ ಕ್ರಮ: ಪ್ರಧಾನಿ
ಕೇಂದ್ರ ಸರ್ಕಾರದ ರೈತರ ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮ ನಡೆದದ್ದು ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು...

ನವದೆಹಲಿ: ಕೇಂದ್ರ ಸರ್ಕಾರದ ರೈತರ ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮ ನಡೆದದ್ದು ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ನಿನ್ನೆ ನೀಡಿದ್ದ ಸಿಎಜಿ ವರದಿ ಆಧರಿಸಿ ಪ್ರತಿಪಕ್ಷಗಳು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ರೈತರ ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮ ನಡೆದಿದ್ದು, ಕೇಂದ್ರ ಸರ್ಕಾರ ಯೋಜನೆ ಜಾರಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡವು. ಪ್ರಧಾನಿ ಸಿಂಗ್ ಅವರ ಹೇಳಿಕೆಗೆ ತೃಪ್ತರಾಗದ ಬಿಜೆಪಿ ಸದಸ್ಯರು ರಾಜ್ಯಸಭೆಯಲ್ಲಿಯೂ ಕೋಲಾಹಲ ಸೃಷ್ಟಿಸಿದರು.
2008ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ರು. 52000 ಕೋಟಿ ಮೊತ್ತದ ರೈತರ ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮ ನಡೆದಿದ್ದು, ಫಲಾನುಭವಿಗಳಿಗೆ ಈ ಯೋಜನೆ ದಕ್ಕಿಲ್ಲ ಆದರೆ ಅರ್ಹಲ್ಲದ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ಸಾಲ ಪಡೆದ ರೈತರು ಈ ಯೋಜನೆಯಿಂದ ಲಾಭ ಪಡೆದಿದ್ದಾರೆ. ಯೋಜನೆಯಲ್ಲಿ ಸರ್ಕಾರದ ಹಣ ಸಾಕಷ್ಟು ಸೋರಿಕೆಯಾಗಿದೆ ಎಂದು ಸಿಎಜಿ ವರದಿ ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


