ಈಗಿನ ಸುದ್ದಿ

ಕಾಲಮಿತಿ ಸೇವಾ ಮಸೂದೆಗೆ ಒಪ್ಪಿಗೆ ಸೂಚಿಸಿದ ಕೇಂದ್ರ

Published On :

ನವದೆಹಲಿ: ಪಾರ್ಸ್‌ಪೋರ್ಟ್, ಪಿಂಚಣಿ, ಜನನ-ಮರಣ ಮತ್ತು ಇತರೆ ಕೆಲಸಗಳಿಗೆ ಕಾಲಮಿತಿಯಲ್ಲಿ ಸೇವೆ ಒದಗಿಸುವ ಮಸೂದೆಗೆ ಕೇಂದ್ರ ಸರ್ಕಾರ ಗುರುವಾರ ಒಪ್ಪಿಗೆ ಸೂಚಿಸಿದೆ.

ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಒಪ್ಪಿಗೆ ಸೂಚಿಸಿಲಾಗಿದೆ. ಕಾಲ ಮಿತಿಯಲ್ಲಿ ಉತ್ತಮ ಸೇವೆ ಒದಗಿಸುವ ಈ ಮಸೂದೆಯನ್ನು 2011ರಲ್ಲಿಯೇ ಜಾರಿಗೆ ತರಬೇಕಾಗಿತ್ತು.

ಈ ಮಸೂದೆಯ ಪ್ರಕಾರ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಕಡತಗಳನ್ನು ಪೂರ್ಣಗೊಳಿಸದ ಸರ್ಕಾರಿ ಅಧಿಕಾರಿಗೆ ಸುಮಾರು ರು. 50000ವರೆಗೆ ದಂಡ ವಿಧಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮಸೂದೆ ಜಾರಿಯಾದರೆ ಆಡಳಿತದಲ್ಲಿ ಪಾರದರ್ಶಕತೆ ಉಂಟಾಗುವುದಲ್ಲದೇ, ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಕಾಲ ಮಿತಿಯಲ್ಲಿ ಕಡತಗಳು ವಿಲೇವಾರಿಯಾಗಬೇಕಾದರೆ ಎಲ್ಲ ಸಾರ್ವಜನಿಕ ಇಲಾಖೆಗಳಲ್ಲಿ ಪ್ರತ್ಯೇಕ ಕಾಲ್ ಸೆಂಟರ್, ಸಹಾಯವಾಣಿ ಜಾರಿಗೆ ತರಬೇಕು ಅಂದಾಗ ಮಾತ್ರ ಮಸೂದೆಗೆ ಮಹತ್ವ ಬರಲು ಸಾಧ್ಯ ಎಂದು ಶಾಸಕಾಂಗ ಸೂಚಿಸಿದೆ. ಈ ಮಸೂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳಿಗೆ ಅನ್ವಯಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.