ಈಗಿನ ಸುದ್ದಿ

ರಾಜ್ಯ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಾಘೇಲ ಪ್ರಮಾಣ

ರಾಜ್ಯ ಹೈ ಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ ಡಿ.ಎಚ್. ವಾಘೇಲ ಅವರು ಪ್ರಮಾಣ ವಚನ ಸ್ವೀಕರಿಸಿದರು.

Published On :

ಬೆಂಗಳೂರು: ರಾಜ್ಯ ಹೈ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ ಡಿ.ಎಚ್. ವಾಘೇಲ ಅವರು ಗುರವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ನ್ಯಾ. ವಾಘೇಲ ಅವರಿಗೆ ಪ್ರಮಾಣ ವಚನ ಬೋಧಿಸಿದರು. ವಾಘೇಲ ಅವರು ಮೂಲತಃ ಗುಜರಾತ್ ಮೂಲದವರಾಗಿದ್ದು, ಗುಜರಾತ್‌ನಿಂದ 2009ರಲ್ಲಿ ರಾಜ್ಯಕ್ಕೆ ವರ್ಗಾವಣೆಗೊಂಡಿದ್ದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಹೈ ಕೋರ್ಟ್‌ನ ಹಲವಾರು ವಕೀಲರು ಸೇರಿದಂತೆ ಪ್ರಮುಖ ಗಣ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.