ಈಗಿನ ಸುದ್ದಿ

ಬಾಕ್ಸರ್ ವಿಜೇಂದರ್ ಸಿಂಗ್ ಪತ್ನಿ ಕಾರಲ್ಲಿ ಡ್ರಗ್ಸ್ ಪತ್ತೆ

ಬಾಕ್ಸರ್ ವಿಜೇಂದರ್ ಸಿಂಗ್ ಪತ್ನಿ ಕಾರಲ್ಲಿ ಡ್ರಗ್ಸ್ ಪತ್ತೆ
Published On :

ಮೊಹಾಲಿ: ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರ ಪತ್ನಿಗೆ ಸೇರಿದ ಕಾರಲ್ಲಿ ಬಹುಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.

ಪಂಜಾಬ್‌ನ ಜೀರಕ್‌ಪುರದಲ್ಲಿರುವ ವಿಜೇಂದರ್ ಸಿಂಗ್ ಅವರಿಗೆ ಸೇರಿದ ಫ್ಲಾಟ್ ಬಳಿ ನಿಂತಿದ್ದ ಕಾರಲ್ಲಿ ಸುಮಾರು 130 ಕೋಟಿ ರು. ಮೌಲ್ಯದ 26 ಕೆಜಿ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ವಿಜೇಂದರ್ ಸಿಂಗ್ ಪತ್ನಿ ಅರ್ಚನಾಸಿಂಗ್ ಅವರಿಗೆ ಸೇರಿದ ಈ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ ಡ್ರಗ್ಸ್ ಸಾಗಿಸುತ್ತಿದ್ದ ರಾಮ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ರಾಮ್ ಸಿಂಗ್ ತಾನು ವಿಜೇಂದರ್ ಸಿಂಗ್ ಅವರಿಗೆ ಡ್ರಗ್ಸ್ ಸರಬರಾಜು ಮಾಡಲು ಬಂದಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

ಆದರೆ ಘಟನೆ ಕುರಿತು ತಕ್ಷಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಾಕ್ಸರ್ ವಿಜೇಂದರ್ ಸಿಂಗ್ ನನಗೂ ಈ ಡ್ರಗ್ಸ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಬಂಧಿತ ರಾಮ್ ಸಿಂಗ್ ಯಾರೆಂದು ನನಗೆ ತಿಳಿದೇ ಇಲ್ಲ. ಈತನನ್ನು ನಾನು ಈ ಮೊದಲು ನೋಡಿಯೇ ಇಲ್ಲ. ವಿನಾ ಕಾರಣ ತನ್ನ ಹೆಸರನ್ನು ಹಾಳು ಮಾಡಲು ಯಾರೋ ತನ್ನ ವಿರುದ್ಧ ಷಢ್ಯಂತ್ರ ರೂಪಿಸುತ್ತಿದ್ದಾರೆ ಎಂದು ದೂರಿದರು. ಅಲ್ಲದೆ ಪ್ರಕರಣ ಕುರಿತಂತೆ ತಾವೂ ಸಹ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವುದಾಗಿ ವಿಜೇಂದರ್ ತಿಳಿಸಿದರು.

ಡ್ರಗ್ಸ್ ಮಾಫಿಯಾದಲ್ಲಿ ವಿಜೇಂದರ್ ಸಿಂಗ್ ದಂಪತಿಗಳು ಸಿಲುಕಿರುವುದು ಕ್ರೀಡಾ ಕ್ಷೇತ್ರದಲ್ಲಿ ದಿಗ್ಭ್ರಮೆ ಉಂಟುಮಾಡಿದೆ. ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾದ ಕೈವಾಡವಿರುವ ಕುರಿತು ಪೊಲೀಸರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬಂಧಿತ ರಾಮ್ ಸಿಂಗ್ ಈ ಹಿಂದೆ ಮಾರ್ಚ್ 3 ರಂದೂ ಸಹ ಅನಾಮಧೇಯ ವ್ಯಕ್ತಿಗೆ 540 ಕೆಜಿ ಹೆರಾಯಿನ್ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.