ಈಗಿನ ಸುದ್ದಿ

ರವಿ ಬೆಳಗೆರೆ ವಿರುದ್ಧ ಜಾಮೀನು ರಹಿತ ವಾರೆಂಟ್

Published On :

ಚಿತ್ರದುರ್ಗ: ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಚಿತ್ರದುರ್ಗ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಚಿತ್ರದುರ್ಗದ ಜೆಎಂಫ್‌ಸಿ ನ್ಯಾಯಾಲಯವು "ಅವಹೇಳನಕಾರಿ ಲೇಖನ ಪ್ರಕಟ" ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

ಚಿತ್ರದುರ್ಗ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸುನಿತಾ ಮಲ್ಲಿಕಾರ್ಜುನ್ ಅವರ ವಿರುದ್ಧ ರವಿ ಬೆಳಗೆರೆ ಅವರು ತಮ್ಮ ಪತ್ರಿಕೆಯಲ್ಲಿ ಅವಹೇಳನಕಾರಿಯಾಗಿ ಲೇಖನ ಪ್ರಕಟಿಸಿದ್ದರು ಎಂದು ಆರೋಪಿಸಿ ಸುನಿತಾ ಮಲ್ಲಿಕಾರ್ಜುನ್ ಅವರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ಈ ಹಿಂದೆ ಹಲವು ಬಾರಿ ರವಿ ಬೆಳಗೆರೆ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದರೆ ರವಿ ಬೆಳಗೆರೆ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಇಂದು ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.