ಜರ್ಮನ್ ಮಹಿಳೆ ಅತ್ಯಾಚಾರ: ಬಿಟ್ಟಿ ಮೊಹಾಂತಿ ಪೊಲೀಸರ ವಶಕ್ಕೆ
ಕೊಚ್ಚಿ: ಜರ್ಮನ್ ಮಹಿಳೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ಮಾಜಿ ಡಿಜಿಪಿ ಬಿಬಿ ಮೊಹಾಂತಿ ಅವರ ಮಗ ಬಿಟ್ಟಿ ಮೊಹಾಂತಿ ಅವರನ್ನು ಕೇರಳ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ರಾಜಸ್ತಾನದ ಆಲ್ವಾರ್‌ನಲ್ಲಿ 2006ರಲ್ಲಿ ಜರ್ಮನ್ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೊಹಾಂತಿ, ಪೆರೋಲ್ ಮೇಲೆ ಬಿಡುಗಡೆಯಾಗಿದ್ದನು. ಪೆರೋಲ್‌ನ ಅವಧಿ ಮುಗಿದಿದ್ದರೂ ಪೊಲೀಸರಿಗೆ ಶರಣಾಗದ ಮೊಹಾಂತಿ, ನಂತರ ತಲೆಮರೆಸಿಕೊಂಡಿದ್ದನು. ಆರೋಪಿ ಮೊಹಾಂತಿಗೆ ಪೆರೋಲ್ ರಜೆ ನೀಡುವಲ್ಲಿ ಆತನ ತಂದೆ ಒಡಿಶಾದ ಮಾಜಿ ಡಿಜಿಪಿ ಬಿಬಿ ಮೊಹಾಂತಿ ಅವರ ಕೈವಾಡವಿದೆ ಎಂದು ಸ್ಥಳೀಯ ಮಾಧ್ಯಮಗಳು ಶಂಕೆ ವ್ಯಕ್ತಪಡಿಸಿದ್ದವು.
ಬಹುದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಬಿಟ್ಟಿ ಮೊಹಾಂತಿಯನ್ನು ಇದೀಗ ಕೇರಳ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಬ್ಯಾಂಕ್ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕೇರಳ ಪೊಲೀಸರು ಮೊಹಾಂತಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಲೆಮರೆಸಿಕೊಂಡಿದ್ದ ಬಿಟ್ಟಿ ಮೊಹಾಂತಿ ಆಂಧ್ರಪ್ರದೇಶದ ಖಾಸಗಿ ಬ್ಯಾಂಕಿನಲ್ಲಿ ಉದ್ಯೋಗ ಮಾಡುತ್ತಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬ್ಯಾಂಕಿನ ದಾಖಲೆ ಮೂಲಕ ಬಿಟ್ಟಿ ಮೊಹಾಂತಿ ಆಂಧ್ರಪ್ರದೇಶದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕೇರಳ ಮತ್ತು ರಾಜಸ್ತಾನ ಪೊಲೀಸರು ಜಂಟಿಯಾಗಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಂದು ಕೇರಳ ಪೊಲೀಸರು ಬಿಟ್ಟಿ ಮೊಹಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಇಂದು ಮಧ್ಯಾಹ್ನದ ಹೊತ್ತಿಗೆ ರಾಜಸ್ತಾನ ಪೊಲೀಸರು ಕೇರಳಕ್ಕೆ ಆಗಮಿಸಲಿದ್ದು, ಬಂಧಿತ ಆರೋಪಿಯನ್ನು ಗುರುತಿಸುವ ಕೆಲಸ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

