ಈಗಿನ ಸುದ್ದಿ

ಪಾಕ್‌ನಲ್ಲಿ ಸ್ಫೋಟ: 6 ಸಾವು, 28 ಜನರಿಗೆ ಗಾಯ

Published On :

ಇಸ್ಲಾಮಾಬಾದ್: ಪೇಶಾವರ್‌ನ ಮಸೀದಿಯೊಂದರಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಜನ ಮೃತಪಟ್ಟಿದ್ದಾರೆ ಮತ್ತು 28 ಜನ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಮಸೀದಿಯ ಒಳಗಡೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಆರು ಜನ ಮೃತಪಟ್ಟಿದ್ದಾರೆ ಎಂದು ಪೇಶಾವರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖಲಿದ್ ಹಮ್ದಾನಿ ತಿಳಿಸಿದ್ದಾರೆ.

ನಗರದ ಶಹೀನ್ ಬಜಾರ್‌ನಲ್ಲಿರುವ ಗಂಜ್ ಅಲಿ ಖಾನ್ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನ ಮೃತಪಟ್ಟಿದ್ದಾರೆ ಮತ್ತು 28 ಜನ ಗಾಯಗೊಂಡಿದ್ದಾರೆ ಎಂದು ಡಾನ್ ಟೀವಿ ವರದಿ ಮಾಡಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೀಯೊ ಟೀವಿ ವರದಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.