ಈಗಿನ ಸುದ್ದಿ

ದೆಹಲಿ ಗ್ಯಾಂಗ್‌ರೇಪ್: ಪ್ರಮುಖ ಆರೋಪಿ ರಾಮ್‌ಸಿಂಗ್ ಜೈಲಲ್ಲೇ ಆತ್ಮಹತ್ಯೆ

ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುವ ಬಸ್‌ನಲ್ಲಿ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ...

ದೆಹಲಿ ಗ್ಯಾಂಗ್‌ರೇಪ್: ಪ್ರಮುಖ ಆರೋಪಿ ರಾಮ್‌ಸಿಂಗ್ ಜೈಲಲ್ಲೇ ಆತ್ಮಹತ್ಯೆ
Published On :

ನವದೆಹಲಿ: ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುವ ಬಸ್‌ನಲ್ಲಿ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಮ್ ಸಿಂಗ್, ಸೋಮವಾರ ಬೆಳಗ್ಗೆ ದೆಹಲಿಯ ತಿಹಾರ್ ಜೈಲಿನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

23 ವರ್ಷದ ರಾಮ್‌ಸಿಂಗ್ ತಿಹಾರ್ ಜೈಲಿನ ವಾರ್ಡ್ ನಂ 5ರಲ್ಲಿ ಬೆಳಗ್ಗೆ 5ಗಂಟೆ ಸುಮಾರಿಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತಿ ಹೆಚ್ಚು ಭದ್ರತೆ ಹೊರಾತಾಗಿ ರಾಮ್‌ಸಿಂಗ್ ಹೇಗೆ ನೇಣುಹಾಕಿಕೊಂಡ ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಜೈಲಿನ ಅಧಿಕಾರಿ ಜಿ.ಸುಧಾಕರ್ ತಿಳಿಸಿದ್ದಾರೆ.

ಡಿಸೆಂಬರ್ 16ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳಲ್ಲಿ ಪೊಲೀಸರು ಇತನ ಮೇಲೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಸೋಮವಾರ ದೆಹಲಿ ತ್ವರಿಗತ ನ್ಯಾಯಾಲಯದಲ್ಲಿ ನಡೆಯಬೇಕಾಗಿತ್ತು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಮ್‌ಸಿಂಗ್ ತಂದೆ, ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಅವನನ್ನು ಹತ್ಯೆ ಮಾಡಿ ನಂತರ ಆತನ ಕೋಣೆಯಲ್ಲಿ ನೇಣುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿಬೇಕು ಎಂದು ಕೇಂದ್ರ ಸರ್ಕಾರಕ್ಕೆ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.