ಡ್ರಗ್ಸ್ ಪತ್ತೆ: ವಿಜೇಂದರ್ ಪಾತ್ರದ ಕುರಿತು ಸಾಕ್ಷ್ಯಾಧಾರ

ಮೊಹಾಲಿ: ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಪಾತ್ರವಿರುವ ಕುರಿತು ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಮೊಹಾಲಿಯ ಜೀರಕ್ಪುರದ ಅಪಾರ್ಟ್ ಮೆಂಟ್ನಲ್ಲಿ ಪತ್ತೆಯಾದ ಅಪಾರ ಪ್ರಮಾಣದ ಹೆರಾಯಿನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೊಹಾಲಿ ಪೊಲೀಸರು ಇಬ್ಬರು ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ರಾಮ್ ಸಿಂಗ್ ಅವರ ಪಾತ್ರವಿರುವ ಕುರಿತು ಹಲವು ಸಾಕ್ಷ್ಯಾಧಾರಗಳನ್ನು ತಾವು ಕಲೆಹಾಕಿರುವುದಾಗಿ ತಿಳಿಸಿದ್ದಾರೆ.
ಆದರೆ ಪಂಜಾಬ್ ಪೊಲೀಸರ ಹೇಳಿಕೆಯನ್ನು ತಳ್ಳಿ ಹಾಕಿರುವ ಬಾಕ್ಸರ್ ವಿಜೇಂದರ್ ಸಿಂಗ್ ಅವರು, ತಾವು ಯಾವುದೇ ರೀತಿಯ ಉದ್ದೀಪನ ಮದ್ದು ಸೇವಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರಕರಣದ ತನಿಖೆಗಾಗಿ ಪಂಜಾಬ್ ಪೊಲೀಸರು ಕೇಳಿದ್ದ ಕೂದಲು ಮತ್ತು ರಕ್ತದ ಮಾದರಿಯ ಪರೀಕ್ಷೆಗೆ ವಿಜೇಂದರ್ ಸಿಂಗ್ ನಕಾರ ವ್ಯಕ್ತಪಡಿಸಿದ್ದಾರೆ.
"ತಮಗೆ ಮೊಹಾಲಿ ಪೊಲೀಸರ ಮೇಲೆ ಭರವಸೆ ಇಲ್ಲ. ಹೀಗಾಗಿ ನನ್ನ ಕೂದಲು ಮತ್ತು ರಕ್ತದ ಮಾದರಿಯನ್ನು ಅವರಿಗೆ ಪರೀಕ್ಷೆಗಾಗಿ ನೀಡುವುದಿಲ್ಲ. ರಾಷ್ಟ್ರೀಯ ಮಟ್ಟದ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ಅಥವಾ ಅಂತಾರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ವಾಡಾ)ದ ಮುಂದೆ ತಾವು ಪರೀಕ್ಷೆಗೆ ಸಿದ್ದ ಎಂದು ವಿಜೇಂದರ್ ತಿಳಿಸಿದ್ದಾರೆ.
ಒಟ್ಟಾರೆ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆ ಪ್ರಕರಣ ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಪ್ರಕರಣದಿಂದಾಗಿ ಅವರ ಭವಿಷ್ಯವೇ ಮಸುಕಾಗಿದ್ದು, ತನಿಖೆಯ ನಂತರ ಅವರ ಭವಿಷ್ಯ ನಿರ್ಧಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


