ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು ವಿಫಲ: ಶೆಟ್ಟರ್
ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಬಳಿ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ ಮತ್ತು ಪಕ್ಷದ ಆಂತರಿಕ ಕಚ್ಚಾಟಗಳು ಸ್ಥಳೀಯ ಸಂಸ್ಥೆಗಳ..

ಬೆಂಗಳೂರು: ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಬಳಿ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ ಮತ್ತು ಪಕ್ಷದ ಆಂತರಿಕ ಕಚ್ಚಾಟಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲು ಕಾರಣವಾಯಿತು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಂಗಳವಾರ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಸೋಲಿನ ಕುರಿತು ಪರಾಮರ್ಶಿಸಲು ಇಂದು ತಮ್ಮ ಅಧೃಕತ ನಿವಾಸ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ, ಬಿಜೆಪಿಯ ಆಂತರಿಕ ಕಚ್ಚಾಟ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ನಮ್ಮ ನಾಯಕರು ವಿಫಲವಾಗಿದ್ದಾರೆ ಎಂದರು. ಇದೇ ವೇಳೆ ಆಪರೇಷನ್ ಕಮಲ, ಭ್ರಷ್ಟಾಚಾರ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಮರಳಿ ಪಕ್ಷದ ಬಗ್ಗೆ ಭರವಸೆ ಮೂಡಿಸುವುದು ಹಾಗೂ ಪಕ್ಷದ ಅಧ್ಯಕ್ಷರನ್ನು ಶೀಘ್ರವೇ ನೇಮಕ ಮಾಡುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು ಎನ್ನಲಾಗಿದೆ. ಈ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಬಿಜಿಪಿ ನಾಯಕರು ಎಚ್ಚೆತ್ತುಕೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿ ನಡೆಸಿದ್ದಾರೆ.
ಸಭೆ ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಬಳಿ ತಲುಪಿಸಲು ವಿಫವಾಗಿರುವುದರಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷ ಸೋಲನುಭವಸಿದೆ ಹೊರತು ಬಿಜೆಪಿ ಶಕ್ತಿ ಕ್ಷಿಣಿಸಿಲ್ಲ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ಬಂದಿದೆ ಎಂದು ಬೀಗಬೇಕಾದ ಅಗತ್ಯ ಇಲ್ಲ, ಜನರ ಮನಸ್ಥಿತಿ ಚುನಾವಣೆಗಳಿಂದ ಚುನಾವಣೆಗಳಿಗೆ ಭಿನ್ನವಾಗಿರುತ್ತವೆ ಎಂದು ರವಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


