ಡಿವೈಎಸ್ಪಿ ಹತ್ಯೆ : ರಾಜಾಭಯ್ಯಾ ಆಪ್ತರ ಬಂಧನ
ಲಖನೌ: ಉತ್ತರ ಪ್ರದೇಶದ ಕುಂದ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜಾಭಯ್ಯಾ ಅವರ ಇಬ್ಬರು ಆಪ್ತರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಕುಂದ ಗ್ರಾಮದ ಡಿವೈಎಸ್ಪಿ ಜಿಯಾ-ಉಲ್-ಹಕ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ರಾಜಾಭಯ್ಯಾ ಅವರ ಇಬ್ಬರು ಆಪ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜಾಭಯ್ಯಾ ಆಪ್ತರೆಂದು ಹೇಳಲಾಗುತ್ತಿರುವ ರಾಜೀವ್ ಯಾದವ್ ಮತ್ತು ಸಂಜಯ್ ಸಿಂಗ್ ಎಂಬ ವ್ಯಕ್ತಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸ್ಥಳೀಯ ನ್ಯಾಯಾಲಯ ಈ ಇಬ್ಬರು ವ್ಯಕ್ತಿಗಳನ್ನು 14 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿದೆ.
ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯ ಕುಂದ ಗ್ರಾಮದಲ್ಲಿ ನಡೆದ ಗುಂಪುಘರ್ಷಣೆ ವೇಳೆ ಅಪರಿಚಿತ ವ್ಯಕ್ತಿಗಳು ಡಿವೈಎಸ್ಪಿ ಜಿಯಾ-ಉಲ್-ಹಕ್ ಅವರನ್ನು ಭೀಕರವಾಗಿ ಕೊಂದು ಪರಾರಿಯಾಗಿದ್ದರು. ಅಲ್ಲದೆ ಗುಂಪು ಘರ್ಷಣೆಯಲ್ಲಿ ಸ್ಥಳೀಯ ಇಬ್ಬರು ನಿವಾಸಿಗಳೂ ಸಹ ಸಾವನ್ನಪ್ಪಿದ್ದರು. ಹತ್ಯೆ ಹಿಂದೆ ಉತ್ತರ ಪ್ರದೇಶದ ಪ್ರಭಾವಿ ರಾಜಕಾರಣಿ ರಾಜಾಭಯ್ಯಾ ಅವರ ಹೆಸರು ಭಲವಾಗಿ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ರಾಜಾಭಯ್ಯಾ ಅವರಿಂದ ರಾಜಿನಾಮೆ ಪಡೆದು, ಪ್ರಕರಣದ ತನಿಖೆಯನ್ನು ಸಿಬಿಐಗಿ ಒಪ್ಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

