ಈಗಿನ ಸುದ್ದಿ

ಕಾಶ್ಮೀರ: ಹಿಜ್ಬುಲ್ ಉಗ್ರರ ದಾಳಿ; ಐವರು ಯೋಧರ ಸಾವು

Published On :

ಶ್ರೀನಗರ: ಮೂರು ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಸಿಆರ್‌ಪಿಎಫ್ ಕ್ಯಾಂಪ್ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ ಮತ್ತು 7 ಯೋಧರು ಗಾಯಗೊಂಡಿದ್ದಾರೆ.

ಶ್ರೀನಗರದ ಬೆಮಿನಾ ಪ್ರದೇಶದಲ್ಲಿರುವ ಪಬ್ಲಿಕ್ ಸ್ಕೂಲ್ ಬಳಿ ಅವಿತುಕೊಂಡಿದ್ದ ಉಗ್ರರು ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಶಾಲಾ ಮಕ್ಕಳು ಆಟವಾಡುತ್ತಿದ್ದರು ಎನ್ನಲಾಗಿದೆ. ಆದರೆ ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಸಿಆರ್‌ಪಿಎಫ್ ಯೋಧರ ಹಾಗೂ ಉಗ್ರರ ಮಧ್ಯ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ರಕ್ಷಣಾ ಪಡೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ರಾಜ್ಯದ ಓರ್ವ ಯೋಧ ಸಾವು:
ಮೃತಪಟ್ಟ ಐವರು ಯೋಧರಲ್ಲಿ ಓರ್ವ ಯೋಧ ಕರ್ನಾಟಕದವರಾಗಿದ್ದು, ಮಂಡ್ಯ ಜಿಲ್ಲೆ. ಕೆ.ಆರ್.ಪೇಟೆ ತಾಲೂಕಿನ ಸತೀಶ್ ಎಂದು ಹೇಳಲಾಗಿದೆ.

ಉಗ್ರರ ದಾಳಿಗೆ ಬೇಹುಗಾರಿಕಾ ವೈಫಲ್ಯವೇ ಕಾರಣ ಎಂದು ನಿವೃತ್ತ ಮೇಜರ್ ಜನರಲ್ ಎಂ.ಸಿ.ನಂಜಪ್ಪ ಅವರು ಹೇಳಿದ್ದಾರೆ.

ದಾಳಿ ನಡೆದಿದ್ದು ಹೀಗೆ: ಕ್ರಿಕೆಟ್ ಆಡುವ ನೆಪದಲ್ಲಿ ಟ್ರ್ಯಾಕ್‌ಸೂಟ್ ಧರಿಸಿ, ಕ್ರಿಕೆಟ್ ಬ್ಯಾಗ್‌ನಲ್ಲೇ ಶಸ್ತಾಸ್ತ್ರ ತಂದಿದ್ದ ಉಗ್ರರು, ಅಲ್ಲಿದ್ದ ಸಿಆರ್‌ಪಿಎಫ್ ಯೋಧರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ನಾವೇ ಹೊಣೆ: ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆ ಶ್ರೀನಗರದ ಹೃದಯ ಭಾಗದಲ್ಲಿ ಬುಧವಾರ ನಡೆದ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.