ಈಗಿನ ಸುದ್ದಿ

ಲಂಕಾದಿಂದ 16 ತಮಿಳು ಮೀನುಗಾರರ ಬಿಡುಗಡೆ

Published On :

ಟುಟಿಕೊರಿನ್ : ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ 16 ಮೀನುಗಾರರನ್ನು ಶ್ರೀಲಂಕಾ ಕೋರ್ಟ್ ಬಿಡುಗಡೆ ಮಾಡಿದೆ.

ನಾಗಪಟ್ಟಣಂನ ತರುವೈಕುಲಂ ಗ್ರಾಮದ ಮೀನುಗಾರರ ನಾಲ್ಕು ಬೋಟ್‌ಗಳನ್ನು ಶ್ರೀಲಂಕಾ ನೌಕಾಪಡೆ ಅಧಿಕಾರಿಗಳು ಮಾರ್ಚ್ 3ರಂದು ಬಂಧಿಸಿದ್ದರು.

ಈ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾದ ಕುತಲಂ ಕೋರ್ಟ್ ಮಾರ್ಚ್ 11ರಂದು ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಲಂಕಾ ಸರ್ಕಾರ ಮೀನುಗಾರರನ್ನು ಬಿಡುಗಡೆ ಮಾಡಿದ್ದು, ಅವರೆಲ್ಲರೂ ಇಂದು ತಮ್ಮ ಬೋಟ್‌ಗಳೊಂದಿಗೆ ತಾಯಿನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೀನುಗಾರರ ಬಿಡುಗಡೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಎರಡು ಬಾರಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು, ಮಧ್ಯ ಪ್ರವೇಶಿಸಿ ಎಂದು ಕೇಳಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.