ಭೂ ದಾಖಲೆ ತಿರುಚು: ಡಿಸಿ ಅಯ್ಯಪ್ಪ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಭೂ ದಾಖಲೆ ತಿರುಚಿದ ಆರೋಪಕ್ಕೆ ಸಿಲುಕಿ ಬಂಧನಕ್ಕೀಡಾಗಿರುವ ಡಿಸಿ ಅಯ್ಯಪ್ಪ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಸರ್ಕಾರಿ ಭೂ ದಾಖಲೆಯನ್ನು ತಿದ್ದಿದ ಆರೋಪದ ಮೇಲೆ ನಿನ್ನೆ ಬಂಧಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎಂ.ಕೆ ಅಯ್ಯಪ್ಪ, ಕಂದಾಯ ನೋಂದಣಾಧಿಕಾರಿ ರವಿಕುಮಾರ್, ವಿಶೇಷ ತಹಶೀಲ್ದಾರ್ ಗೋಪಾಲಸ್ವಾಮಿ ಮತ್ತು ಕಂದಾಯ ಇಲಾಖೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಇಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.
ಬೆಂಗಳೂರು ಸಮೀಪದ ಸರ್ಕಾರಿ ಗೋಮಾಳ ಜಾಗವನ್ನು ಅಕ್ರಮವಾಗಿ ನೀಡಲು ಯತ್ನಿಸಿದ ಡಿಸಿ ಅಯ್ಯಪ್ಪ ಅವರು, ಇದಕ್ಕಾಗಿ ಜಮೀನಿನ ಭೂ ದಾಖಲೆಯನ್ನೇ ತಿರುಚಲು ಮುಂದಾಗಿದ್ದರು. ಬೆಂಗಳೂರಿನ ಯಲಹಂಕ ಬಳಿಯ ಮಾದಪ್ಪನ ಹಳ್ಳಿಯ ಸರ್ವೇ ನಂಬರ್ 62 ರಲ್ಲಿನ 32 ಎಕರೆ ಸರ್ಕಾರಿ ಭೂಮಿಯನ್ನು ಡಿಸಿ ಅಯ್ಯಪ್ಪ ಅವರು ಸ್ಥಳೀಯ ಶಾಸಕ ವಿಶ್ವನಾಥ್ ಅವರ ಸಂಬಂಧಿ ನರಸಿಂಹಯ್ಯ ಅವರಿಗೆ ಪರಭಾರೆ ಮಾಡಿಕೊಡಲು ಯತ್ನಿಸಿದ್ದರು.
ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಡಿಸಿ ಅಯ್ಯಪ್ಪ ಅವರನ್ನು ಹೊರತುಪಡಿಸಿ ಉಳಿದ ಮೂವರು ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನೋಟಿಸ್ ಜಾರಿಮಾಡಿತ್ತು. ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ನಿನ್ನೆ ಡಿಸಿ ಅಯ್ಯಪ್ಪ ಸೇರಿದಂತೆ ಪ್ರಕರಣದ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


