ಈಗಿನ ಸುದ್ದಿ

ಕೇರಳದಲ್ಲಿ ಎಚ್ಚರದಿಂದಿರಲು ತನ್ನ ಪ್ರಜೆಗಳಿಗೆ ಇಟಲಿ ಸೂಚನೆ

ಮೀನುಗಾರರ ಹತ್ಯೆ ಪ್ರಕರಣದಲ್ಲಿ ಭಾರತದ ನಡುವಿನ ಭಿನ್ನಾಭಿಪ್ರಾಯ ತಾರಕ್ಕೇರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ವಿಶೇಷವಾಗಿ ಕೇರಳದಲ್ಲಿ...

Published On :

ನವದೆಹಲಿ: ಮೀನುಗಾರರ ಹತ್ಯೆ ಪ್ರಕರಣದಲ್ಲಿ ಭಾರತದ ನಡುವಿನ ಭಿನ್ನಾಭಿಪ್ರಾಯ ತಾರಕ್ಕೇರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ವಿಶೇಷವಾಗಿ ಕೇರಳದಲ್ಲಿ ವಾಸಿಸುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದ ಇರಲು ಇಟಲಿ ಶನಿವಾರ ಸೂಚಿಸಿದೆ.

ಉಭಯ ರಾಷ್ಟ್ರಗಳ ನಡುವೆ ಒಡಕುಂಟಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ವಾಸಿಸುವ ರಾಜ್ಯಗಳಲ್ಲಿ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿರುವ ಇಟಲಿ ಸರ್ಕಾರ, ಜನಸಂದಣಿ ಪ್ರದೇಶಗಳಿಂದ ದೂರವಿರುವಂತೆ ಹಾಗೂ ಎಲ್ಲ ಪ್ರಜೆಗಳು ಸಾಧ್ಯವಾದಷ್ಟು ತಮ್ಮ ಜನರ ನಡುವೆ ಸಂಪರ್ಕದಲ್ಲಿರುವಂತೆ ಇಟಲಿ ದೂತವಾಸ ಕಚೇರಿ ತಿಳಿಸಿದೆ.

ಚುನಾವಣೆಯಲ್ಲಿ ಮತಹಾಕಲು ನಾಲ್ಕು ವಾರ ಅವಕಾಶ ನೀಡಬೇಕು, ನಾಲ್ಕು ವಾರಗಳ ನಂತರ ಈ ಅಧಿಕಾರಿಗಳನ್ನು ಮತ್ತೆ ಭಾರತಕ್ಕೆ ಕರೆತರುವುದಾಗಿ ಇಟಲಿ ದೂತವಾಸ ಕಚೇರಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತ್ತು. ಆದರೆ ಈಗ ಇಟಲಿ ಸರ್ಕಾರ ಆ ಇಬ್ಬರನ್ನು ಭಾರತಕ್ಕೆ ಮರಳಿ ಕಳುಹಿಸುವುದಿಲ್ಲ ಎಂದು ಹೇಳಿರುವುದು ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ಈ ಪ್ರಕರಣದಲ್ಲಿ, ಇಟಲಿಯ ಇಬ್ಬರು ನೌಕಾ ಸಿಬ್ಬಂದಿಯನ್ನು ಅಲ್ಲಿನ ಸರ್ಕಾರ ಭಾರತಕ್ಕೆ ವಾಪಸು ಕಳುಹಿಸದಿರುವುದರಿಂದ ಸುಪ್ರೀಂ ಕೋರ್ಟ್ ಇಟಲಿ ರಾಯಭಾರಿ ಅವರಿಗೆ ತನ್ನ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಆದೇಶಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.