ಈಗಿನ ಸುದ್ದಿ

ಮುಲಾಯಂಗೆ ಉಗ್ರರ ಸಂಪರ್ಕವಿದೆ: ಬೇನಿ ಪ್ರಸಾದ್

Published On :

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಭಯೋತ್ಪಾದಕರ ಸಂಪರ್ಕವಿದೆ ಎಂದು ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮಾ ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಸತ್‌ನಲ್ಲಿ ಮಾತನಾಡಿದ ಬೇನಿ ಪ್ರಸಾದ್, 2002ರ ಗಲಭೆಗಳ ನಂತರ ಸಮಾಜವಾದಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷಾ ಜೊತೆಯಾಗಿ ಗುಜರಾತ್ ಚುನಾವಣೆಯಲ್ಲಿ  ಹೋರಾಡಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವಂತೆ ಮಾಡಿವೆ ಎಂದು ಆರೋಪಿಸಿದರು.

ಅಲ್ಲದೇ ಮುಲಾಯಂ ಸಿಂಗ್ ಯಾದವ್ ಅವರಿಗೆ ಭಯೋತ್ಪಾದಕರ ಸಂಪರ್ಕವಿದೆ ಎಂದು ಹೇಳಿ ವಿವಾದಕ್ಕೆ ಕಾರಣವಾಗಿದ್ದಾರೆ.

ಬೇನಿ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಸಂಸದರು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಯಿಸಿದ ಬೇನಿ, ನನ್ನನ್ನು ವಜಾಗೊಳಿಸುವಂತೆ ಕೇಳಲು ಮುಲಾಯಂ ಯಾರು? ಅವರು ನನ್ನನ್ನು ಮಂತ್ರಿ ಮಾಡಿದ್ದಾರೆಯೇ? ರಾಷ್ಟ್ರದ್ರೋಹ ಮಾಡಿರುವ ಅವರು ಕ್ಷಮೆಯಾಚಿಸಬೇಕು ಎಂದರು.

ಭಯೋತ್ಪಾದನೆಗೆ ಯಾವುದೇ ಧರ್ಮ ಮತ್ತು ಬಣ್ಣವಿಲ್ಲ. ಬಾಬ್ರಿ ಮಸೀದ್ ಧ್ವಂಸ ಮತ್ತು ಗೋದ್ರಾ ಹತ್ಯಾಕಾಂಡ ಘಟನೆಗಳು ಕೂಡ ಭಯೋತ್ಪಾದನೆಗೆ ಸಂಬಂಧಪಟ್ಟಂತ್ತದ್ದು. ಇಂತಹ ಅಪರಾಧವೆಸಗಿರುವವರಿಗೆ ಮುಲಾಯಂ ಬೆಂಬಲಿಸಿ, ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ ಎಂದು ಆಪಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.